ಸುರಪುರ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ಸಹಪಠ್ಯ ಚಟುವಟಿಕೆಯಲ್ಲಿ ಯಾದಗಿರಿ ಜಿಲ್ಲಾ ಮಟ್ಟದ ಹಂತದ ಭಾವಗೀತೆ ಸ್ಪರ್ಧೆಯಲ್ಲಿ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ಆರ್.ಕೆ.ಕೋಡಿಹಾಳ ಶಿಕ್ಷಕರ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೇಕಾರ, ಕ್ಷೇತ್ರ ಸಮನ್ವಯಾಧಿಕಾರಿ ಅಮರೇಶ ಕುಂಬಾರ ಮತ್ತು ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಖಾದರ್ ಪಟೇಲ್ ಹಾಗು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಅಭಿನಂಧಿಸಿ ಹಾರೈಸಿದ್ದಾರೆ.