ನವದೆಹಲಿ: ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾದ ರಾಜ್ಯಸಭಾ ಸದಸ್ಯ ಸ್ಥಾನಕ್ಕೆನಡೆಯಲಿರುವ ಚುನಾವಣೆಗೆ ಡಾ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಡಿ. 12 ರಂದು ಚುನಾವಣೆ ನಡೆಯಲಿದ್ದು, ಡಿ. 2 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಇತ್ತೀಚೆಗೆ ಕೆ.ಸಿ.ರಾಮಮೂರ್ತಿ ಕಾಂಗ್ರೆಸ್ ತೊರೆದು ಬಿಜೆಪಿ
ಸೇರಿರುವ ಬಿಜೆಪಿಯಿಂದ ಕಣದಲ್ಲಿದ್ದಾರೆ.