ಕಲಬುರಗಿ: ಜಗದ್ಗುರು ಶ್ರೀ ರೇಣುಕಾಚಾರ್ಯರ ಸದ್ಭಕ್ತ ಮಂಡಳಿಯ ವತಿಯಿಂದ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಜಗದ್ಗುರು ಶ್ರೀ ರೇಣುಕಾಚಾರ್ಯರರ ಹೆಸರಿಡುವಂತೆ ಒತ್ತಾಯಿಸಿ ಹೋರಾಟ ರೂಪಿಸುವ ಹಿನ್ನೆಲೆಯಲ್ಲಿ ಇದೇ ಡಿ. 2 ರಂದು ಬೆಳಿಗ್ಗೆ 11ಗಂಟೆಗೆ ಕಲಬುರಗಿ ನಗರದ ಸರ್ದಾರ ವಲ್ಲಭ್ಬಾಯಿ ವೃತ್ತದಲ್ಲಿರುವ ಕನ್ನಡ ಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಸದ್ಭಕ್ತ ಮಂಡಳಿಯ ಅಧ್ಯಕ್ಷರಾದ ಅಣವೀರಯ್ಯಾ ಪ್ಯಾಟಿಮನಿ ಕೋಡ್ಲಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯೊಂದನ್ನು ನೀಡಿರುವ ಅವರು ರಾಜ್ಯ ಸರ್ಕಾರದ ಗಮನಕ್ಕೆ ತರುವ ಮತ್ತು ಹೋರಾಟ ರೂಪಿಸುವ ಹಿನ್ನೆಲೆಯಲ್ಲಿ ಸಧ್ಬಕ್ತರ ಚಿಂತನಾ ಸಭೆ ಕರೆಯಲಾಗಿದ್ದು ಕಲ್ಯಾಣ ಕರ್ನಾಟಕ ಸೇರಿದಂತೆ ನಾಡಿನಾಧ್ಯಂತ ಇರುವ ಜಗದ್ಗುರು ಶ್ರೀ ರೇಣುಕಾಚಾರ್ಯರರ ಭಕ್ತ ವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೋ. ಸಂಖ್ಯೆ ೯೯೭೨೧೫೪೧೪೪ ಸಂಖ್ಯೆಗೆ ಸಂಪರ್ಕಿಸುವಂತೆ ವಿನಂತಿಸಿದ್ದಾರೆ.