ಕಲಬುರಗಿ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ೨೦೧೯-೨೦ನೇ ಸಾಲಿನಲ್ಲಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ.ಅಂಗಡಿ ತಿಳಿಸಿದ್ದಾರೆ.
ಅಭ್ಯರ್ಥಿಗಳ ವಯೋಮಿತಿ ೧೬ ರಿಂದ ೨೪ ವರ್ಷದೊಳಗಿರಬೇಕು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ೧೦,೦೦೦ ರೂ.ಗಳ ಶಿಷ್ಯವೇತನ ನೀಡಲಾಗುತ್ತದೆ. ಅರ್ಜಿಯನ್ನು ಅಕಾಡೆಮಿಯ ಕಚೇರಿಯಿಂದ ಅಥವಾ ಅಕಾಡೆಮಿಯ www.karnatakasangeetanrityaacademy.com ವೆಬ್‌ಸೈಟ್‌ದಿಂದ ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಉಚಿತವಾಗಿ ಪಡೆದು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-೫೬೦೦೦೨ ವಿಳಾಸಕ್ಕೆ ೨೦೧೯ರ ಡಿಸೆಂಬರ್ ೨೦ ರೊಳಗಾಗಿ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ. ೧೦ ನ್ನು ಸ್ಟ್ಯಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ಮೇಲ್ಕಂಡ ಅಕಾಡೆಮಿಯ ವಿಳಾಸಕ್ಕೆ ಕಳುಹಿಸಿ ಪಡೆಯಬಹುದಾಗಿದೆ. ಅದೇ ರೀತಿ ಅಕಾಡೆಮಿಯಿಂದ ೨೦೧೯-೨೦ನೇ ಸಾಲಿನಲ್ಲಿ ಗುರುಶಿಷ್ಯ ಪರಂಪರೆಯಡಿ ಕಲಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ದಿನಾಂಕ: ೪-೧೧-೨೦೧೯ರ ಸರ್ವ ಸದಸ್ಯರ ಸಭೆ ತೀರ್ಮಾನದಂತೆ ಸದರಿ ಯೋಜನೆಯನ್ನು ಕೈಬಿಡಲಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.