ಕಲಬುರಗಿ: ಕರ್ನಾಟಕ ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಘಟಕದ ವತಿಯಿಂದ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ 63ನೇ ಮಹಾಪರಿನಿರ್ವಾಣದ ಅಂಗವಾಗಿ ಇದೇ 9 ರಂದು ಭಾರತದ ದಲಿತರ ಮುಂದಿರುವ ಸವಾಲುಗಳು ಹಾಗೂ ವಂಚಿತ ಸವಲತ್ತುಗಳ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದಾತ ಸಮಿತಿಯ ಸಂಚಾಲಕ ಪಾಂಡುರಂಗ ಮಾವಿನಕರ ತಿಳಿಸಿದ್ದಾರೆ.
ನಗರದ ಡಾ. ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿ ಬೆಳಿಗ್ಗೆ 11 ಕ್ಕೆ ಉರಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮಿಜಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ದಲಿತ ಹಕ್ಕುಗಳ ಸಮಿತಿಯ ರಾಜ್ಯ ಸಂಚಾಲಕರಾದ ಗೋಪಾಲಕೃಷ್ಣ ಹರಳಹಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ ಎಂದು ಸಮಿತಿಯ ಸಹ ಸಂಚಾಲಕ ಸುಧಾಮ ಧನ್ನಿ ತಿಳಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ರಾಜ್ಯದ ಮಾರುತಿ ಮಾನಪಡೆ ಅವರು ಮುಖ್ಯಅತಿಥಿಯಾಗಿ ಆಗಮಿಸಲಿದ್ದಾರೆಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.