ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಶೈಕ್ಷಣಿಕ ಹತ್ಯೆಗಳ ವಿರುದ್ಧ ಕ್ಯಾಂಪಸ್ ಫ್ರಂಟ್ ವತಿಯಿಂದ ಜಾಗೃತಿ ಅಭಿಯಾನ

0
28

ಕೊಪ್ಪಳ/ಕನಕಗಿರಿ : ಕ್ಯಾಂಪಸ್ ಫ್ರಂಟ್ ಕೊಪ್ಪಳ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗು ಪ್ರೌಢ ಶಾಲಾ ವಿಭಾಗದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹಾಗು ಶೈಕ್ಷಣಿಕ ಹತ್ಯೆಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮನ್ನು ಉದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಸೈಯದ್ ಸರ್ಫಾರಜ್ ಸಂವಿಧಾನವು ಸಮರ್ಪಕವಾಗಿ ಜಾರಿಗೊಳ್ಳಲಿ. ಟಿಪ್ಪು ಸುಲ್ತಾನರು ಮಹಿಳೆಯರ ಬಗ್ಗೆ ಕಾಳಜಿ ಮತ್ತು ಸಮಾನತೆಯ ವಿಚಾರಗಳು ಸಮಾಜದಲ್ಲಿ ಬಿತ್ತುವ ಮೂಲಕ ಸಮಾಜವನ್ನು ಜಾಗೃತ ಗೊಳಿಸಬೇಕಿದೆ. ಮಹಿಳಾ ದೌರ್ಜನ್ಯ ತಡೆ ಕಾನೂನುಗಳನ್ನು ಬಲಪಡಿಸಿದರೆ ಮಾತ್ರ ಹೆಚ್ಚಾಗುತ್ತಿರುವ ಮಹಿಳಾ ದೌರ್ಜನ್ಯಗಳನ್ನು ತಡೆಯಲು ಸಾಧ್ಯ ಎಂದು ಹೇಳಿದರು.

Contact Your\'s Advertisement; 9902492681

ಬಳಿಕ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಮಾತನಾಡಿ ಹೆಚ್ಚಾಗುತ್ತಿರುವ ಮಹಿಳಾ ದೌರ್ಜನ್ಯಗಳನ್ನು ತಡೆಯಲು ವಿದ್ಯಾರ್ಥಿನಿಯರು ಆತ್ಮರಕ್ಷಣಾ ಕಲೆಯನ್ನು ಕಲಿಯಬೇಕು ಹಾಗು ಇಂತಹ ಮನಸ್ಥಿತಿಗಳನ್ನು ಎದುರಿಸಬೇಕು ಅಲ್ಲದೆ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ವಿದ್ಯಾರ್ಥಿನಿಯರು ಮಾನವ-ಸರಪಳಿ ನಿರ್ಮಿಸಿ ಅತ್ಯಾಚಾರ ಹಾಗೂ ಶೈಕ್ಷಣಿಕ ಹತ್ಯೆಗಳ ವಿರುದ್ದ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಮರಪ್ಪ, ಪ್ರೌಢ ಶಾಲೆಯ ಮುಖ್ಯಪಾಧ್ಯಾಯರಾದ ಕನಕಚಲರವರು ಮಾತನಾಡಿ ಹೆಣ್ಣಿನ ಮಹತ್ವದ ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯಾರದ ಶಭಾನ, ಜಿಲ್ಲಾ ಸಮಿತಿ ಸದಸ್ಯರಾದ ಇಮ್ರಾನ್, ಇರ್ಫಾನ್,ಹಾಗು ಶಾಲಾ-ಕಾಲೇಜಿನ ಶಿಕ್ಷಕರು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಹಮೀದ್ ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here