ಕಲಬುರಗಿ: ಇಲ್ಲಿನ ಚಿಂಚೋಳಿ ಕೆಲಸ ತಾಲ್ಲೂಕಿನ ಸುಲೇಪೇಟ್ ಗ್ರಾಮದ ಕುರಿ ಸಾಕಾಣಿಕೆ ಕೆಲಸ ಮಾಡುತ್ತಿದ ವ್ಯಕ್ತಿಯೊಬ್ಬ ನಷ್ಟವುಂಟಾಗಿ ಮನನೊಂದು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನರಸಪ್ಪ ಪೂಜಾರಿ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ.
ಸುಲೇಪೇಟ್ ನಿವಾಸಿತಾದ ನರಸಪ್ಪ ಸುಮಾರು ವರ್ಷಗಳಿಂದ ಕುರಿ ಸಾಗಣಿಕೆ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದ್ದು, ಕೆಲ ದಿನಗಳಿಂದ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಮನನೊಂದಿದ್ದ ಎಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅನುಮಾನಿಸಲಾಗಿದೆ.
ಸುಮಾರು 2 ಲಕ್ಷ ರೂಪಾಯಿ ಸಾಲ ಮಾಡಿದಿದ್ದ ನರಸಪ್ಪ, ಮರಳಿಸಲು ಆಗದೆ, ಗ್ರಾಮದ ಹೊರವಲಯದಲ್ಲಿರುವ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಮೃತದೇಹ ಹೊರತೆಗೆದ್ದಾರೆ.
ಈ ಕುರಿತು ಸುಲೇಪೇಟ್ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತಿದ್ದಾರೆ.