ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾಗಿ ರಮೇಶ ದೊರೆ ನೇಮಕ

0
189

ಸುರಪುರ: ಯಾದಗಿರಿ ಜಿಲ್ಲಾ ಅನುಸೂಚಿತ ಜಾತಿ ಮತ್ತು ಅನಸೂಚಿತ ಪಂಗಡ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ ಸಮಾಜ ಸೇವಕ ರಮೇಶ ದೊರೆ ಆಲ್ದಾಳವರನ್ನು ನೇಮಕಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಕೂರ್ಮರಾವ್ ಪ್ರಕಟಣೆ ಹೊರಡಿಸಿದ್ದಾರೆ.

ಈ ಸಮಿತಿಯು ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಪ್ರಕರಣಗಳ ವಿಚಾರಣೆ,ಪರಿಹಾರ ಮತ್ತು ಪುನರ್ ವಸತಿ ಇತ್ಯಾದಿಗೆ ಸಂಬಂಧಿಸಿದಂತೆ ಅನುಸರಣಾ ಕ್ರಮವನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳು ನೇಮಕಾತಿ ನಡಾವಳಿಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ತಮ್ಮ ಸೇವೆಯನ್ನು ಗುರುತಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನತೆಯ ಸೇವೆಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸದಸ್ಯರನ್ನಾಗಿ ನೇಮಿಸಿದ್ದಕ್ಕೆ ಇಬ್ಬರು ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here