85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ

0
70

ಕಲಬುರಗಿ: ರಾಜ್ಯದ ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ, ಲೋಕೋಪಯೋಗಿ ಸಚಿವರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಗೋವಿಂದ ಎಂ. ಕಾರಜೋಳ ಅವರು ಗುರುವಾರ ಕಲಬುರಗಿ ನಗರದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಸಮ್ಮೇಳನ ಕಚೇರಿ ಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು ೨೦೨೦ರ ಫೆಬ್ರವರಿ ೫, ೬ ಮತ್ತು ೭ ರಂದು ಮೂರು ದಿನಗಳ ಕಾಲ ನಡೆಯುವ ನುಡಿ ಜಾತ್ರೆಯ ಕಾರ್ಯಚಟುವಟಿಕೆ ಅಧಿಕೃತವಾಗಿ ಆರಂಭಿಸಲು ಇಂದು ಸಮ್ಮೇಳನ ಕಚೇರಿ ಉದ್ಘಾಟಿಸಲಾಗಿದೆ. ಸಮ್ಮೇಳನದ ಯಶಸ್ವಿಗೆ ಒಟ್ಟಾರೆ ೧೬ ಸಮಿತಿಗಳನ್ನು ರಚಿಸಲಾಗಿದ್ದು, ನಾಳೆಯಿಂದಲೆ ಎಲ್ಲಾ ಸಮಿತಿಗಳು ತನ್ನ ಕೆಲಸಗಳನ್ನು ಆರಂಭಿಸಲು ನಿರ್ದೇಶನ ನೀಡಲಾಗಿದೆ ಎಂದರು.

Contact Your\'s Advertisement; 9902492681

ಸಮ್ಮೇಳನಕ್ಕೆ ಎರಡೂವರೆ ತಿಂಗಳು ಮಾತ್ರ ಬಾಕಿ ಇರುವುದರಿಂದ ಸಮ್ಮೇಳನದ ಕೆಲಸಗಳು ಪ್ರಥಮಾದ್ಯತೆ ಮೇಲೆ ಕೈಗೊಳ್ಳಬೇಕು. ಸ್ಮರಣ ಸಂಚಿಕೆ ಹೊರತರುವ ಜವಾಬ್ದಾರಿ ಮುಖ್ಯವಾಗಿದ್ದು, ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಇದಲ್ಲದೆ ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ನಾಡಿನ ಮೂಲೆ-ಮೂಲೆಗಳಿಂದ ಸಾಹಿತ್ಯಾಸಕ್ತರು, ಕನ್ನಡ ಪ್ರೇಮಿಗಳು ಭಾಗವಹಿಸುವುದಿರಂದ ಎಲ್ಲಾ ಪ್ರಾಂತ್ಯಗಳ ರುಚಿಯಾದ ಊಟದ ವ್ಯವಸ್ಥೆ ಇರುವಂತೆ ಆಹಾರ ಸಮಿತಿ ನೋಡಿಕೊಳ್ಳಬೇಕು. ಊಟ, ಉಪಚಾರ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಶಾಸಕರಾದ ಬಸವರಾಜ ಮತ್ತಿಮೂಡ, ಡಾ. ಅವಿನಾಶ ಜಾಧವ, ವಿಧಾನ ಪರಿ?ತ್ತಿನ ಶಾಸಕರಾದ ಬಿ.ಜಿ.ಪಾಟೀಲ, ಪೊಲೀಸ್ ಆಯುಕ್ತ ಡಾ.ಎಂ.ಎನ್.ನಾಗರಾಜ್, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಮಹಾನಗರ ಪಾಲಿಕೆಯ ಅಯುಕ್ತ ರಾಹುಲ ಪಾಂಡ್ವೆ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here