ಕಲಬುರಗಿ ನಗರದ್ಯಾಂತ 144 ಜಾರಿ
ಕಲಬುರಗಿ: ಮಸೀದಿಗಳು ಮತ್ತು ಡಿಸಿ ಕಚೇರಿ ಆವರಣದಲ್ಲಿ ಶುಕ್ರವಾರದ ಪ್ರಾರ್ಥನೆಯನ್ನು ಹೊರತುಪಡಿಸಿ ನಗರ ವ್ಯಾಪ್ತಿಯಲ್ಲಿ ಸೆಕ್ಷನ್, 144 ಅನ್ನು ಬೆಳಿಗ್ಗೆ 13 ರಿಂದ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ವಿಧಿಸಲಾಗಿದೆ.
ಇಂದು ಪೌರತ್ವ ಮಸೂದೆ ವಿರುದ್ಧ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ರ್ಯಾಲಿಗಳ ಹಮ್ಮಿಕೊಳ್ಳುಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.