ಬೆಂಗಳೂರು: ಲಂಚಾವತಾರ, ನಡುಬೀದಿ ನಾರಾಯಣ ಮೊದಲಾದ ನಾಟಕಗಳು ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿತಿರುವಂತ ಹಿರಿಯ ರಂಗ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರ ನಿಧನ.
ಹಿರಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮಾಸ್ಟರ್ ಹಿರಣ್ಣಯ್ಯ ಅವರ ಹಲವು ನಾಟಕಗಳು ಸಮಾಜದ ಪಿಡುಗುಗಳಿಗೆ ವಿಡಂಬನೆಯ ಮೂಲಕ ಜನಸಾಮನ್ಯರಿಗೆ ಚುಚ್ಚುಮದ್ದು ನೀಡುವುದು ಅವರ ವೈಶಿಷ್ಟ್ಯವಾಗಿತ್ತು. ಅವರ ನಿಧನದಿಂದ ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಿಎಂ ದುಃಖ ವ್ಯಕ್ತಪಡಿಸುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ಅಪಾರ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಸಿಎಂ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ದಶಕಗಳ ಕಾಲ ವೃತ್ತಿ ರಂಗಭೂಮಿಯ ಕಾಯಕ ಮಾಡಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಹಾಸ್ಯ, ಅಭಿನಯ, ಹರಿತ ಸಂಭಾಷಣೆ ಅವರ ವೈಶಿಷ್ಟ್ಯ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಹಿರಣ್ಣಯ್ಯ ಅವರು ನಿಧನ ಸ್ಯಾಂಡಲವೂಡ್ ಕಂಬನಿ ಮಿಡಿದ್ದು, ಅವರ ಪಾರ್ಥಿವ ಶರಿರಕ್ಕೆ ಭೇಟಿ ನೀಟಿ ನಮನ ಸಲ್ಲಿಸಿದರು.