ಡಾ. ಚಿ.ಸಿ. ನಿಂಗಣ್ಣ ಅವರ ಕೃತಿಗಳ ಲೋಕಾರ್ಪಣೆ 28 ರಂದು

0
127

ಕಲಬುರಗಿ: ಕರ್ನಾಟಕ ಜಾನಪದ ಪರಿಷತ್ತಿನ ಕಲಬುರಗಿ ತಾಲೂಕು ಘಟಕದ ಉದ್ಘಾಟನೆ ಹಾಗೂ ಲೇಖಕ ಡಾ. ಚಿ.ಸಿ. ನಿಂಗಣ್ಣ ಅವರು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಡಿ. ೨೮ರಂದು ನಗರದ ಅನ್ನಪೂರ್ಣ ಕ್ರಾಸ್ ಬಳಿಯಿರುವ ಕಲಾ ಮಂಡಳದಲ್ಲಿ ಜರುಗಲಿದೆ ಎಂದು ಪರಿಷತ್ತಿನ ಪದಾಧಿಕಾರಿಗಳು ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವೈಚಾರಿಕತೆ ಮತ್ತು ಸಾಹಿತ್ಯ ಕೃತಿಯ ಲೋಕಾರ್ಪಣೆಯನ್ನು ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ನೆರವೇರಿಸಲಿದ್ದಾರೆ. ಕಡೆಗೀಲು ಬಂಡಿಗಾಧಾರ ಕೃತಿಯ ಲೋಕಾರ್ಪಣೆಯನ್ನು ಜಿ.ಪಂ. ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ ನೆರವೇರಿಸಲಿದ್ದಾರೆ. ವೈಚಾರಿಕತೆ ಮತ್ತು ಸಾಹಿತ್ಯ ಕೃತಿ ಕುರಿತು ಬೀದರ್‌ನ ಸಾಹಿತಿ ಗವಿಸಿದ್ದಪ್ಪ ಎಚ್. ಪಾಟೀಲ ಮಾತನಾಡಲಿದ್ದು, ಕಡಗೀಲು ಬಂಡಿಗಾಧಾರ ಕೃತಿ ಕುರಿತು ಶರಣ ಮಾರ್ಗ ಪತ್ರಿಕೆಯ ಸಂಪಾದಕ ಶಿವರಂಜನ್ ಸತ್ಯಂಪೇಟೆ ಮಾತನಾಡಲಿದ್ದಾರೆ.

Contact Your\'s Advertisement; 9902492681

ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ನ್ಯಾಯವಾದಿ ಹಣಮಂತ ಯಳಸಂಗಿ ಮಹಾತ್ಮಜ್ಯೋತಿಬಾ ಫುಲೆ ಶೀಕ್ಷಣ ಸಂಸ್ಥೆ ಅಧ್ಯಕ್ಷ ಶಂಕರ ಕೋಡ್ಲಾ, ಜಾನಪದ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಬಸವರಾಜ ಪೊಲೀಸ್ ಪಾಟೀಲ ಆಗಮಿಸಲಿದ್ದಾರೆ. ತಾಲ್ಲೂಕು ಅಧ್ಯಕ್ಷ ಬಿ.ಎಸ್. ಮಾಲಿಪಾಟೀಲ, ಲೇಖಕ ಡಾ. ಚಿ.ಸಿ. ನಿಂಗಣ್ಣ ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here