ಸಿಎಎ, ಎನ್ ಆರ್ ಸಿ ವಿರುದ್ಧ ನಾಳೆ ಮಂಗಳೂರುನಲ್ಲಿ ಬೃಹತ್ ಪ್ರತಿಭಟನೆ: ಪೊಲೀಸರಿಂದ ಬಿಗಿ ಬಂದೋಬಸ್ತ್

0
83

ಮಂಗಳೂರು: ಮೋದಿ ಸರ್ಕಾರದ ವಿವಾದಿತ ಕಾನೂನುಗಳಾದ ಸಿಎಎ, ಎನ್ ಆರ್ ಸಿ ವಿರುದ್ಧ ಮಂಗಳೂರಿನಲ್ಲಿ ನಾಳೆ ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮಂಗಳೂರಿಗೆ ಬಿಗಿ ಪೊಲೀಸ್ ಬಂದೋಬಸ್ತ್  ಒದಗಿಸಲಾಗಿದೆ.

ಮಂಗಳೂರಿನ ಇತಿಹಾಸದಲ್ಲಿ ಇದೇ ಮೊದಲು ಇಂಥದೊಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ದ.ಕ, ಉಡುಪಿ, ಮಡಿಕೇರಿ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಜನ ಸಾಗರ ಹರಿದು ಬಾರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವನ್ನು ವಹಿಸಲಾಗಿದೆ. ಅಂದಹಾಗೆ ಈ ಬೃಹತ್ ಪ್ರತಿಭಟನೆಯನ್ನ ಮಂಗಳೂರಿನ ಹೃದಯ ಭಾಗವಾದ ನೆಹರು ಮೈದಾನದಲ್ಲಿ ಹಮ್ಮಿಕೊಳ್ಳಲು ಮೊದಲು ನಿರ್ಧಾರಿಸಲಾಗಿತ್ತಂತೆ. ಆದರೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರಕದೆ ಇದ್ದ ಕಾರಣ ಮಂಗಳೂರಿನ ಹೊರ ವರ್ತುಲದಲ್ಲಿರುವ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Contact Your\'s Advertisement; 9902492681

ಈ ಕಾರಣದಿಂದ ನಾಳೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬೃಹತ್ ಪ್ರತಿಭಟನೆಯಲ್ಲಿ  ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ ಅನ್ನೋದು ಸಂಘಟಕರ ಮಾತು. ಕಾರ್ಯಕ್ರಮದಲ್ಲಿ ನಾಡಿನ ಚಿಂತಕರು ಸಾಮಾಜಿಕ ಹೋರಾಟಗಾರರು ಭಾಗಿಯಾಗಲಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here