ಆಳಂದ: ತಾಲೂಕಿನ ಜಾವಳಿ (ಡಿ) ಗ್ರಾಮದ ಶತಾಯುಷಿ ಗುರುಲಿಂಗಪ್ಪ ಗರುಡಶೆಟ್ಟಿ (೧೦೨) ಶುಕ್ರವಾರ ಸ್ವಗ್ರಾಮ ಜಾವಳಿ (ಡಿ)ಯಲ್ಲಿ ನಿಧನರಾದರು.
ಮೃತರು ೩ಜನ ಗಂಡು ಮಕ್ಕಳು, ಒರ್ವ ಹೆಣ್ಣು ಮಗಳು, ೫ ಜನ ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮದ ತೋಟದಲ್ಲಿ ಶನಿವಾರ ಮಧ್ಯಾಹ್ನ ೧೨:೩೦ಕ್ಕೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ, ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ, ರಾಜಶೇಖರ ಮಲಶೆಟ್ಟಿ, ಮಲ್ಲಣ್ಣಾ ನಾಗೂರೆ, ಅಶೋಕ ಗುತ್ತೇದಾರ ಸೇರಿದಂತೆ ಇತರರು ಸಂತಾಪ ವ್ಯಕ್ತಪಡಿಸಿದ್ದಾರೆ.