ಕಲಬುರಗಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸದೃಢ ಪ್ರಜಾಪ್ರಭುತ್ವಕ್ಕಾಗಿ ಮತದಾರರಲ್ಲಿ ಸಾಕ್ಷರತೆ ಮೂಡಿಸಲು ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶನಿವಾರ ನಗರದ ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್ ಅವರು ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಉರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರು ಯಾವುದೇ ಆಸೆ, ಅಮೀಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು, ಹಸ್ತಾಕ್ಷರ ಸಂಗ್ರಹ ಅಭಿಯಾನವು ಜರುಗಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ. ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ್, ಪ್ರೊಬೇಷನರಿ ಅಧಿಕಾರಿ ಡಾ. ಗೋಪಾಲಕೃಷ್ಣ, ಡಿಡಿಪಿಐ ಶಾಂತಗೌಡ ಪಾಟೀಲ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಜಿ. ಸಂಗಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ-ಯುವತಿಯರು ಇದ್ದರು.
ಮತದಾರರ ಜಾಗೃತಿ ಜಾಥಾಗೆ ಪ್ರಾದೇಶಿಕ ಆಯುಕ್ತರಿಂದ ಚಾಲನೆ
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಸದೃಢ ಪ್ರಜಾಪ್ರಭುತ್ವಕ್ಕಾಗಿ ಮತದಾರರಲ್ಲಿ ಸಾಕ್ಷರತೆ ಮೂಡಿಸಲು ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶನಿವಾರ ನಗರದ ಚಂದ್ರಶೇಖರ್ ಪಾಟೀಲ ಕ್ರೀಡಾಂಗಣದಿಂದ ಡಾ.ಎಸ್.ಎಂ.ಪಂಡಿತ ರಂಗಮಂದಿರ ವರೆಗೆ ಆಯೋಜಿಸಿದ ಜಾಗೃತಿ ಜಾಥಾಗೆ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಮತ್ತು ಜಿಲ್ಲಾಧಿಕಾರಿ ಶರತ್ ಬಿ. ಅವರು ಚಾಲನೆ ನೀಡಿದರು.
ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಶಾಲಾ-ಕಾಲೇಜುಗಳ ಮಕ್ಕಳು ಮತದಾರರಲ್ಲಿ ಅರಿವು ಮೂಡಿಸಿದರು.
ಜಾಥಾದಲ್ಲಿ ಸಮ್ಮೇಳನದ ಪ್ರಚಾರ ವಾಹನ: ಜಾಥಾದಲ್ಲಿ ೮೫ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅರಿವು ಮೂಡಿಸುವ ಪ್ರಚಾರ ವಾಹನವು ಪಾಲ್ಗೊಂಡು ನುಡಿ ಸಮ್ಮೆಳನದ ಶ್ರವ್ಯ ಮಾಧ್ಯಮದ ಪ್ರಸಾರದೊಂದಿಗೆ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ್, ಪ್ರೊಬೇಷನರಿ ಅಧಿಕಾರಿ ಡಾ. ಗೋಪಾಲಕೃಷ್ಣ, ಡಿಡಿಪಿಐ ಶಾಂತಗೌಡ ಪಾಟೀಲ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಜಿ. ಸಂಗಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ-ಯುವತಿಯರು ಇದ್ದರು.