ಕಲಬುರಗಿ: ಆಳಂದ ತಾಲೂಕಿನ ನಿಂಬರ್ಗಾ ಸಮೀಪದ ಹಿತ್ತಲಶಿರೂರ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಐವರು ಶಂಕಿತರನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ರಾತ್ರೋ ರಾತ್ರಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಮತ್ತು ಚಪ್ಪಲಿ ಹಾಕಿರುವುದು ಘಟನೆ ಗ್ರಾಮದಲ್ಲಿ ಜರುಗಿದ್ದು ಬೆಳಿಗ್ಗೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ 12 ಜನ ಕೃತ್ಯ ವೆಸಗಿದ್ದಾರೆಂದು ತಿಳಿದುಬಂದಿದ್ದು, ಐವರನ್ನು ಪೊಲೀಸರು ಕೃತ್ಯದ ಕುರಿತು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿಳಬೇಕಿದ್ದು, ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಅಪ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು, ಪಿಡಿಓ ಅನೂಸಿಯಾ, ತಹಶೀಲ್ದಾರಾದ ದಯಾನಂದ್ ಪಾಟೀಲ್, ದಲಿತ ಸೇನೆಯ ರಾಜ್ಯಧ್ಯಕ್ಷ, ನ್ಯಾಯವಾದಿ ಹಣಮಂತ ಎಳಸಂಗಿ, ಮಾಜಿ ಶಾಸಕ ಬಿ.ಆರ್ ಪಾಟೀಲ ಸೇರಿದಂತೆ ಮುಂತಾದವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.