ವಿಮಾನ ನಿಲ್ದಾಣಕ್ಕೆ ಅಂಬೇಡ್ಕರ ನಾಮಕರಣಕ್ಕೆ ಒತ್ತಾಯ

0
35

ಕಲಬುರಗಿ: ಕಲಬುರಗಿ ವಿಭಾಗೀಯ ಕೇಂದ್ರದಲ್ಲಿ ವಿಮಾನ ನಿಲ್ದಾಣದ ಕಾರ್ಯರಂಭವಾಗಿದ್ದು ಅದಕ್ಕೆ ಡಾ. ಬಿ.ಆರ್. ಅಂಬೇಡಕರ್ ಅವರ ಹೆಸರು ನಾಮಕರಣ ಮಾಡಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ)ದ ರಾಜ್ಯ ಉಪಾಧ್ಯಕ್ಷ ಟಿ.ಎಂ ಬಾವಿದೊಡ್ಡಿ  ಆಗ್ರಹಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸರಕಾರದಲ್ಲಿ ಆರ್‌ಪಿಐ(ಎ) ರಾಷ್ಟ್ರೀಯ ಅಧ್ಯಕ್ಷರಾದ ರಾಮದಾಸ ಅಠವಾಲೆ ಅವರು ಸಚಿವರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಅಪಾರ ಅಭಿಮಾನ ಹೊಂದಿದ್ದಾರೆ. ನಮ್ಮ ಮನವಿಗೆ ಸ್ಪಂಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Contact Your\'s Advertisement; 9902492681

ವಿಮಾನ ನಿಲ್ದಾಣದ ನಾಮಕರಣ ಕುರಿತು ಎಲ್ಲಾ ಸಹೋದರ ದಲಿತ ಸಂಘಟನೆಗಳೊಂದಿಗೆ ಚರ್ಚೆ ಮಾಡಲಾಗವುದು. ಎಲ್ಲರ ನಿರ್ಣಯದಂತೆ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಹೋರಾಟ ರೂಪಿಸಲಾಗುವದು. ಎಲ್ಲಾ ಸಂಘ ಸಂಸ್ಥೆಗಳ ಬೆಂಬಲ ಇದೆ ಎಂದು ಹೇಳಿದರು.

ರಾಜ್ಯ ಸರಕಾರ ಶಿಕ್ಷಣ ಸಚಿವರಾದ ಸುರೇಶ ಕುಮಾರ ೨೬ ರಂದು ಗಣರಾಜೋತ್ಸವ ಸಮಾರಂಭಗಳಲ್ಲಿ ಮಹಾತ್ಮ ಗಾಂಧಿ ಭಾವಚಿತ್ರದೊಂದಿಗೆ ಕಡ್ಡಾಯವಾಗಿ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಬೇಕು ಎಂದು ಇತ್ತೀಚಿಗೆ ಸುತ್ತೋಲೆ ಹೊರಡಿಸಿರುವದು ಸ್ವಾಗತಾರ್ಹವಾಗಿದೆ. ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಈ ಸಂದರ್ಭದಲ್ಲಿ ಅಭಿನಂಧಿಸುತ್ತೇವೆ ಎಂದರು.

ಫೆ. ೧ ಮತ್ತು ೨ ರಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಆರ್‌ಪಿಐ ಮತ್ತು ಸಮತಾ ಸೈನಿಕ ದಳದ ಪದಾಧಿಕಾರಿಗಳ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಗುಲಬರ್ಗಾ, ಬೀದರ, ಮತ್ತು ರಾಯಚೂರ ಜಿಲ್ಲೆಗಳಿಂದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) ಎಮದು ನಮೋದಿಸುತ್ತಿರುವದುದರಿಂದ ಬೇರೆಯವರ ಇದನ್ನು ದರುಪಯೋಗ ಪಡಿಸಿಕೋಳ್ಳುತ್ತಿರುವುದು ಕಂಡು ಬಂದಿದೆ. (ಎ) ಎಂದರೆ ಅಠವಾಲೆ ಬಣ ಎಂದು ಸ್ಪಷ್ಟವಾಗಿ ಬರೆದುಕೊಳ್ಳವಂತೆ ಕೇಂದ್ರ ಸಮಿತಿಯಿಂದ ಸೂಚನೆ ಬಂದಿದೆ. ಸಂಸದ ಪರಿಶಿಷ್ಟ ಜಾತಿಯಲ್ಲಿ ಬರುವದಿಂದ ಕ್ಷೇತ್ರದ ದಲಿತರು ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕು  ಎಮದು ಪಕ್ಷವು ಒತ್ತಾಯ ಮಾಡುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಶರ್ಮಾ, ಯಾದಗಿರಿ ಜಿಲ್ಲಾ ಅಧ್ಯಕ್ಷ ಮಹಾದೇವ ದಿಗ್ಗಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here