ಮಂಗಳವಾರ ಪವಿತ್ರ ರಮಝಾನ್ ಮಾಸದ ಉಪವಾಸ ವ್ರತ ಆರಂಭ: ಸಚಿವ ಜಮೀರ್ ಅಹ್ಮದ್ ಘೋಷಣೆ

0
130

ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರದಿಂದ ಪವಿತ್ರ ರಮಝಾನ್ ಮಾಸದ ಉಪವಾಸ ವ್ರತ ಆಚರಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅವರು ನಗರದ ವಕ್ಫ್ ಬೋರ್ಡ್ ಕಚೇರಿಯಲ್ಲಿ ರಾಜ್ಯ ಚಂದ್ರ ದರ್ಶನ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರಾವಳಿ ಜಿಲ್ಲೆಗಳು ಹೊರತುಪಡಿಸಿ, ರಾಜ್ಯದ ಯಾವುದೇ ಭಾಗದಲ್ಲಿ ಚಂದ್ರ ದರ್ಶನವಾದ ಮಾಹಿತಿ ಲಭ್ಯವಾಗದ, ಹಿನ್ನೆಲೆಯಲ್ಲಿ ಮಂಗಳವಾರದಿಂದ ಉಪವಾಸ ವ್ರತ ಆಚರಿಸಲು ರಾಜ್ಯ ಚಂದ್ರ ದರ್ಶನ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

Contact Your\'s Advertisement; 9902492681

ಸಮಿತಿಯ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದ್ದು, ಈ ಸಂದರ್ಭದಲ್ಲಿ ಹಿರಿಯ ಧಾರ್ಮಿಕ ಮುಖಂಡರು, ಚಂದ್ರ ದರ್ಶನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here