ಕಲಬುರಗಿ: ಕೇಂದ್ರ ಸರಕಾರದಿಂದ ಅಗತ್ಯ ದಿನ ಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್ಡಿಪಿಐ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆಯಲ್ಲಿ ಎಸ್ಡಿಟಿಯು ರಾಜ್ಯ ಅಧ್ಯಕ್ಷ ಅಬ್ದುಲ್ ರಹೀಂ ಪಟೇಲ್, ಜಿಲ್ಲಾಧ್ಯಕ್ಷ ಸೈಯದ್ ದಸ್ತಗೀರ್, ಜಿಲ್ಲಾ ಕಾರ್ಯದರ್ಶಿ ಅಲೀಮ್ ಇಲಾಹಿ, ಮೊಹಮ್ಮದ್ ಮೊಹ್ಸಿನ್ ಸೇರಿದಂತೆ ಸದಸ್ಯರು ಮತ್ತು ಎಸ್ಡಿಪಿಐ ಕಾರ್ಯಕರ್ತರು ಉಪಸ್ಥಿತರಿದ್ದರು.