ಕಲಬುರಗಿ: ನ್ಯಾಯಾಂಗದಲ್ಲಿ ಕಡ್ಡಾಯವಾಗಿ ಮೀಸಲಾತಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲಬುರಗಿ ದಸಂಸ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದರ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣಯ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಸಂವಿದಾನಬದ್ಧವಾದ ಹಕ್ಕು. ಹೀಗಾಗಿ ಉದ್ಯೋಗ ಮೀಸಲಾತಿ ಜೊತೆಗೆ ಬಡ್ತಿ ಮೀಸಲಾತಿಯನ್ನೂ ನೀಡಬೇಕು. ಜೊತೆಗೆ ನ್ಯಾಯಾಂಗದಲ್ಲಿಯೂ ಮೀಸಲಾತಿ ಕಡ್ಡಾಯಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅರ್ಜುನ ಭದ್ರೆ ಸೇರಿದಂತೆ ಅನೇಕರಿದ್ದರು.