ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮೂರ್ತಿಗೆ ಅವಮಾನ: ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

0
117

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿರುವ ಘಟನೆ ಇಲ್ಲಿನ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಕೃತ್ಯ ಖಂಡಿಸಿ ಗ್ರಾಮಸ್ಥರು ಮತ್ತು ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಮಂಗಳವಾರ ಬೆಳಿಗ್ಗೆ ರಾತ್ರಿ ಕಿಡಿಗೇಡಿಗಳು ಅಂಬೇಡ್ಕರ್ ಪುತ್ಥಳಿಗೆ ಚಪ್ಪಲಿ ಹಾರ ಹಾಕಿದ್ದು ಕಂಡುಬಂದಿದ್ದು, ಘಟನೆಯ ಬಗ್ಗೆ  ತೀವ್ರ ಆಕ್ರೋಶಗೊಂಡ ಸಾರ್ವಜನಿಕರು ಕೆಲ ಹೊತ್ತು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತು. ನಂತರ ಗ್ರಾಮಸ್ಥರು ಹಾಗೂ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಮರಗುತ್ತಿ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ ಹತ್ತಿರ ಆಗಮಿಸಿ ಕಿಡಿಗೇಡಿಗಳನ್ನು ಬಂಧಿಸಿ, ಗ್ರಾಮದಲ್ಲಿ ಹೊಸ ಪುತ್ಥಳಿ ಸ್ಥಾಪನೆ ಮಾಡಬೇಕು ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

Contact Your\'s Advertisement; 9902492681

ಸ್ಥಳಕ್ಕೆ ಶಾಸಕ ಮತ್ತಿಮೂಡ  ಭೇಟಿ ನೀಡಿ, ಹೊಸ ಪುತ್ಥಳಿ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಕೃತ್ಯೆಕೆ ಸಂಭಧಿಸಿದಂತೆ ಕಿಡಿಗೇಡಿ ಯಾರೆ ಆಗಿದರು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಎಸ್ಪಿ ತಿಳಿಸಿದರು. ಪುತ್ಥಳಿ ಪಕ್ಕದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಗ್ರಾಮ ಪಂಚಾಯತ್ ಸೂಚಿಸಿದ್ದೇನೆ ಎಂದು ತಿಳಿಸಿದರು.

ಸ್ಥಳಕ್ಕೆ ಎಸ್ಪಿ ಭೇಟಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ತಹಶೀಲ್ದಾರ್ ಅಂಜುಮ ತಬಸುಮ್ ಸ್ಥಳಕ್ಕೆ ಧಾವಿಸಿ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸುವುದಾಗಿ ಪ್ರತಿಭಟನಾ ನಿರತ ಹೋರಟಗಾರರಿಗೆ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಪ್ರಕಾಶ ಹಾಗರಗಿ, ಕಾಂಗ್ರೆಸ್ ಮುಖಂಡ ವಿಜಯಕುಮಾರ ಜಿ.ರಾಮಕೃಷ್ಣ, ನಿಂಗಪ್ಪ ಪ್ರಬುದ್ಧಕರ್‌, ಅವಿನಾಶ , ವಿದ್ಯಾಧರ, ಗೋಪಾಲ ಗೊಬ್ಬರವಾಡಿ, ನಂದನಕುಮಾರ ಹರಸೂರ, ರಾಜು , ಸುಧೀರ ಹೊನ್ನಳ್ಳಿ, ಸಂಜುಕುಮಾರ, ಅಶೋಕಕುಮಾರ ಗೌರೆ, ಶ್ರೀನಿವಾಸ ಹೋಳಕರ್, ಸುಭಾಷ್  ಸೇರಿದಂತೆ ಮುಂತಾದವುರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here