ಕಲಬುರಗಿ: ದಕ್ಷಿಣ ಮತ್ತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ಸಚಿವ ಸ್ಥಾನ ನೀಡದಿದ್ರೆ ಹತ್ತು ಜನ ಶಾಸಕರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಕೊಡಿಸುವುದಾಗಿ ಇಲ್ಲಿನ ಶ್ರೀಶೈಲ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಸಿಎಂ ಬಿ.ಎಸ್.ವೈಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
ನಗರದ ಎನ್.ವಿ.ಮೈದಾನದಲ್ಲಿ ನಡೆದಲ್ಲಿ ಶಾಸಕ ಪಾಟೀಲ್ ರೇವೂರ ಅವರ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸ್ವಾಮೀಜಿಗಳು, 20 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಬಿಜೆಪಿ ಅಂದ್ರೆ ಹಳೆ ನಾಯಿಯೂ ಕೇಳುತ್ತಿರಲಿಲ್ಲ. ಶಾಸಕ ಪಾಟಿಲ್ ತಂದೆ ಚಂದ್ರಶೇಖರ ಪಾಟೀಲ್ ತಮ್ಮ ಆಸ್ತಿಮಾರಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ,
ಚಂದ್ರಶೇಖರ ಪಾಟೀಲ್ ಗೆ ಮಂತ್ರಿ ಆಗಬೇಕು ಎಂಬ ಆಸೆ ಇಟ್ಟುಕೊಂಡಿದರು, ಆದರೆ ಅವರಿಗೆ ಇದೇ ಸರಕಾರ ಅವಕಾಶ ನೀಡಲಿಲ್ಲ. ಅವರು ವಿಧಿವಶರಾಗಿದ್ದು, ಈಗ ಇದೇ ಸರ್ಕಾರ ಅವರ ಮಗ ಶಾಸಕ ದತ್ತಾತ್ತೇಯ ಪಾಟೀಲ್ 3 ನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದು, ಬಿಜೆಪಿ ಸರಕಾರ ಸಚಿವರನ್ನಾಗಿ ಮಾಡುತಿಲ್ಲ ಎಂದು ವಿಶಾದ ವ್ಯಕ್ತಪಡಿಸಿದರು.
ಈಗ ಅವರ ಪುತ್ರನಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಸ್ವಾಮೀಜಿಗಳ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ ರೇವೂರ ಅವರನ್ನು ಸಚಿವರನ್ನಾಗಿ ಮಾಡಲು ಕೇಳಿದ್ದೆವು. ಆದ್ರೆ, ಸದ್ಯದ ಸ್ಥಿತಿಯಲ್ಲಿ ಸಾಧ್ಯವಿಲ್ಲ, ಒಂದು ವರ್ಷದಲ್ಲಿ ಸಚಿವರನ್ನಾಗಿ ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ. ಮಾತು ಕೊಟ್ಟಂತೆ ಮುಂದಿನ ವರ್ಷದ ಒಳಗಾಗಿ ದತ್ತಾತ್ರೇಯ ಪಾಟೀಲ್ ರೇವೂರಗೆ ಸಚಿವ ಸ್ಥಾನ ನೀಡಬೇಕು, ಸಚಿವ ಸ್ಥಾನ ಕೊಡದಿದ್ರೆ ಹತ್ತು ಶಾಸಕರ ರಾಜೀನಾಮೆ ಕೊಡಿಸುವ ಶಕ್ತಿ ನನ್ನ ಬಳಿ ಇದೆ ಎಂದು ಸಿಎಂಗೆ ಬಹಿರಂಗವಾಗಿಯೇ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ವೇದಿಕೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಯಿ, ಸಂಸದ ಡಾ. ಉಮೇಶ್ ಜಾಧವ್, ಕಂದಾಯ ಸಚಿವರಾದ ಆರ್. ಅಶೋಕ, ಶಾಸಕ ರಾಜುಗೌಡ, ಮಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಸೇರಿದಂತೆ ಪಕ್ಷದ ಜಿಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.