ಖಾಸಗಿ ವಾಹನಗಳ ಮೇಲೆ ಅನಧಿಕೃತ ಸರ್ಕಾರಿ ಸಂಸ್ಥೆಗಳ ಹೆಸರು ಅಳವಡಿಸದಿರಲು ಸೂಚನೆ

0
90

ಕಲಬುರಗಿ: ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಖಾಸಗಿ ವಾಹನಗಳ ಮೇಲೆ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅದರಲ್ಲಿಯೂ ಮುಖ್ಯವಾಗಿ ಮಾನವ ಹಕ್ಕುಗಳ ಆಯೋಗ, ಮತ್ತಿತರ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅನಧೀಕೃತವಾಗಿ ಅಳವಡಿಸಬಾರದೆಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶರತ್ ಬಿ. ಅವರು ತಿಳಿಸಿದಾರೆ.

ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಹೆಸರು ಹಾಗೂ ನಾಮಫಲಕವನ್ನು ಅಳವಡಿಸಿದ ಸಂಘ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ರಾಜಕೀಯ ವ್ಯಕ್ತಿಗಳು ಈ ಪತ್ರಿಕಾ ಪ್ರಕಟಣೆ ಹೊರಡಿಸಿದ ೭ ದಿನಗಳೊಳಗಾಗಿ ನಾಮ ಫಲಕವನ್ನು ತೆರವುಗೊಳಿಸಬೇಕು. ಇಲ್ಲವಾದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here