ಶಿಕ್ಷಣ, ವಿದ್ಯಾರ್ಥಿ ದ್ರೋಹಿ ರಾಜ್ಯ ಸರ್ಕಾರದ ಬಜೆಟ್ : SFI  ಜಿಲ್ಲಾ ಸಮಿತಿ

0
190

ರಾಯಚೂರು: ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಕೇವಲ  29,786 ಕೋಟಿ ರೂಪಾಯಿ 11% ಹಣ ಮಾತ್ರ ನೀಡುವುದರ ಮೂಲಕ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ತಿಳಿಸಿದ್ದಾರೆ.

ಕಳೆದ ವರ್ಷದ ಬಜೆಟ್ ಗಿಂತಲೂ ಈ ವರ್ಷದ ಬಜೆಟ್ ನಲ್ಲಿ 0.3% ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಕಡಿತ ಮಾಡಲಾಗಿದೆ.  ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಮತ್ತೆ ಮಠ ಮಾನ್ಯಗಳಿಗೆ , ಜಾತಿವಾರು ಪ್ರತಿಮೆಗಳ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮೀಸಲಿಡುವುದರ ಮೂಲಕ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಕೋನ ಮತ್ತು ಅಭಿವೃದ್ಧಿ ಕಣ್ಣೋಟ ಇಲ್ಲ ಎಂಬುದು ಈ ಬಜೆಟ್ ನಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದರು.

Contact Your\'s Advertisement; 9902492681

ರಾಜ್ಯದ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್, ಉಚಿತ ಬಸ್ ಪಾಸ್ , ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ 3500/-ರೂ ಹೆಚ್ಚಿಸಬೇಕು , ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನಲ್ಲಿ 30% ಮೀಸಲಿಡಬೇಕು ಎಂದು ಇಡೀ ರಾಜ್ಯಾದ್ಯಂತ  ಹೋರಾಟಗಳನ್ನು ನಡೆಸಿದರು ಈ ರಾಜ್ಯ ಸರ್ಕಾರ ಪರಿಗಣಿಸದೆ ಶಿಕ್ಷಣ ಕ್ಷೇತ್ರಕ್ಕೆ ನಿರ್ಲಕ್ಷ್ಯತೆ ತೋರಿದೆ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ಪ್ರತಿ ಬಾರಿಯೂ ಶಿಕ್ಷಣ ಕ್ಷೇತ್ರಕ್ಕೆ ಹಣ ಕಡಿತ ಮಾಡುವ ಪರಿಪಾಠವನ್ನು ಮುಂದುವರಿಸಿ ರೋದರಿಂದ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದ್ರೋಹ ಬಗೆದಿದೆ. ಈ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇನ್ನಷ್ಟು ಹೋರಾಟಗಳನ್ನು ತೀವ್ರಗೊಳಿಸಲು ಜಿಲ್ಲೆಯ ವಿದ್ಯಾರ್ಥಿ ಸಮುದಾಯಕ್ಕೆ SFI ರಾಯಚೂರು ಜಿಲ್ಲಾ ಸಮಿತಿ ಕರೆ ನೀಡಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here