ಕಲ್ಯಾಣ ಕರ್ನಾಟಕಕ್ಕೆ ಬಂಪರ್ : ಸಚಿವ ಪ್ರಭು ಚವ್ಹಾಣ್ ಹರ್ಷ

0
94

ಬೆಂಗಳೂರು: ಕಲಬುರಗಿ, ಯಾದಗಿರಿ, ರಾಯಚೂರು ಭಾಗದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ತಿಂತಿಣಿ ಬ್ರಿಡ್ಜ್ ಹತ್ತಿರ ಕೃಷ್ಣಾ ನದಿಗೆ ಜಲಾಶಯ ನಿರ್ಮಿಸಲು ಉದ್ದೇಶಿಸಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಕ್ರಮ ವಹಿಸುವ ಬಗ್ಗೆ ಮಾನ್ಯ ಬಿ.ಎಸ್ ಯಡಿಯೂರಪ್ಪನವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿದಂತಾಗುತ್ತದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮಾನ್ಯ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಿದ್ದು ಈ ಭಾಗದ ಅಭಿವೃದ್ಧಿಗೆ ಹೊಸ ನಾಂದಿ ಹಾಡಿದಂತಾಗಿದೆ. ಅಲ್ಲದೆ ಕಲ್ಯಾಣಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಹಲವು ಬಾರಿ ವೈಯಕ್ತಿಕವಾಗಿ ಮತ್ತು ನಿಯೋಗದೊಂದಿಗೆ ಭೇಟಿ ಮಾಡಿದ್ದೆ. ೨೦೨೦-೨೧ನೇ ಸಾಲಿನಲ್ಲಿ ರೂ.೧೫೦೦.೦೦ ಕೋಟಿ ಅನುದಾನ ಘೋಷಣೆ ಮಾಡಿದ್ದು ನಿಜಕ್ಕು ಸಂತಸ ತಂದಿದೆ.

Contact Your\'s Advertisement; 9902492681

ಅಲ್ಲದೆ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವನ್ನು ಹೊಸದಾಗಿ ರಚಿಸಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಸ್ವಯಂ ಉದ್ಯೋಗ, ಯುವ ಸಬಲೀಕರಣ ಹಿಗೆ ಮುಂತಾದ ವಲಯಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಈ ಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಈ ಚಟುವಟಿಕೆಗಳನ್ನು ಮುಂಬರುವ ವರ್ಷಗಳಲ್ಲಿ ೫೦೦ ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳುವ ಬಗ್ಗೆ ಬಜೆಟ್‌ನಲ್ಲಿ ತಿಳಿಸಲಾಗಿದೆ.

ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ ಮುಖ್ಯಮಂತ್ರಿಗಳಿಗೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಪ್ರಮುಖ ಅಂಶಗಳು

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯವರಿಗೆ ವಾಹನ ಚಾಲನಾ ತರಬೇತಿ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಮೂಲಕ ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವ್ಯವಸ್ಥೆ ಮಾಡಲಾಗುವುದು.
  • ದೃಷ್ಟಿದೋಷವುಳ್ಳ ವ್ಯಕ್ತಿಗಳಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಹಾಗೂ ಕಲಬುರಗಿಯಲ್ಲಿ ಬ್ರೈಲ್ ಕಂ ಟಾಕಿಂಗ್ ಲೈಬ್ರರಿಯನ್ನು ರೂ.೩೦.೦೦ಲಕ್ಷಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.
  • ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ಹುಬ್ಬಳ್ಳಿ-ಧಾವಾಡ ನಗರಗಳಲ್ಲಿ ೨೦ ಕೋಟಿ ರೂ. ಮೊತ್ತದಲ್ಲಿ ಶುದ್ಧೀಕರಿಸಿದ ನೀರನ್ನು ಗೃಹೇತರ ಉದ್ದೇಶಕ್ಕೆ ಮರುಬಳಕೆ ಮಾಡುವ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.
  • ರಾಯಚೂರು, ಬಳ್ಳಾರಿ ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿ “ಫ್ಲೂ ಗ್ಯಾಸ್ ಡಿ ಸಲ್ಫರೈಸೇಷನ್” ವ್ಯವಸ್ಥೆಯನ್ನು ಒಟ್ಟು ೨,೫೧೦ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ೨೦೨೦-೨೦೨೧ನೇ ಸಾಲಿನಲ್ಲಿ ೫೦೦ ಕೋಟಿ ರೂ.ಗಳ ವೆಚ್ಚ ಮಾಡಲಾಗುವುದು. ಇದರಿಂದ ವಾಯು ಮಾಲಿನ್ಯದ ಪ್ರಮಾಣವನ್ನು ಗಣನೀಯವಾಗಿ ಕಡಿಮೆಗೊಳಿಸಲು ಸಹಾಯವಾಗುವುದು.
  • ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟವು ಐತಿಹಾಸಿಕ ಹಿನ್ನೆಲೆಯುಳ್ಳ ಸ್ಥಳವಾಗಿದದು, ಶ್ರೀ ಆಂಜನೇಯಸ್ವಾಮಿ ಜನಿಸಿದ ಸ್ಥಳವೆಂದೇ ಪ್ರಸಿದ್ಧಿಯಾಗಿದೆ. ಈ ಬೆಟ್ಟದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಯನ್ನು ೨೦ ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here