20 ಕ್ವಿಂಟಲ್ ತೊಗರಿ ಖರೀದಿ ಮಿತಿ ಶೀಘ್ರ ಆದೇಶಕ್ಕೆ ಮನವಿ

0
313

ಆಳಂದ: ಬೀದರ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿದಂತೆ ತೊಗರಿ ಖರೀದಿ ಮಿತಿಯನ್ನು ೨೦ ಕ್ವಿಂಟಲಗೆ ಹೆಚ್ಚಿಸುವ ಆದೇಶವನ್ನು ಶೀಘ್ರದಲ್ಲಿ ಹೊರಡಿಸಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸದನದಲ್ಲಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಅಧಿವೇಶನದಲ್ಲಿ ಬುಧುವಾರ ನಡೆಯುತ್ತಿದ್ದ ಭಾರತ ಸಂವಿಧಾನದ ಕುರಿತ ವಿಶೇಷ ಚರ್ಚೆಯ ೨ನೇ ದಿನದ ಕಲಾಪದಲ್ಲಿ ನಿಯಮ ೬೯ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರ ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು.

Contact Your\'s Advertisement; 9902492681

ಈ ಮುಂಚೆ ಈ ನಿಯಮದ ಅಡಿಯಲ್ಲಿ ವಿರೋಧ ಪಕ್ಷದ ಶಾಸಕರುಗಳಾದ ಬಂಡೆಪ್ಪ ಖಾಶೆಂಪುರ, ಪ್ರಿಯಾಂಕ ಖರ್ಗೆ ಮತ್ತು ಎಂ ವೈ ಪಾಟೀಲ ತೊಗರಿ ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿ ಮಾಡುವ ಬಗ್ಗೆ ಪ್ರಸ್ತಾಪಿಸಲು ಕಲಾಪಕ್ಕೆ ಮಾಹಿತಿ ನೀಡಿದ್ದರು. ಆದರೆ, ಸ್ವತ: ಅವರೇ ಸದನಕ್ಕೆ ಗೈರು ಹಾಜರಾಗಿದ್ದರಿಂದ ಸದನದಲ್ಲಿ ಇದ್ದ ಶಾಸಕ ಸುಭಾಷ್ ಆರ್ ಗುತ್ತೇದಾರರು ಈ ವಿಷಯದ ಕುರಿತು ಮಾತನಾಡಿ ಸರ್ಕಾರದ ಗಮನ ಸೆಳೆದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಗರಿ ಬೆಳೆದಿದ್ದು ರೈತರು ಈಗಾಗಲೇ ಬೆಳೆದ ತೊಗರಿಯನ್ನು ಮಾರಾಟ ಮಾಡುತ್ತಿದ್ದಾರೆ. ಸರ್ಕಾರ ರೈತರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು ಸಂತೋಷದಾಯಕ. ತೊಗರಿ ಖರೀದಿ ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಆದರೆ, ಪ್ರಸ್ತುತ ಕೇವಲ ೧೦ ಕ್ವಿಂಟಲ್ ಮಾತ್ರ ಖರೀದಿಸುತ್ತಿರುವುದರಿಂದ ರೈತರಿಗೆ ತೊಂದರೆಯಾಗುತ್ತಿದೆ ಹೀಗಾಗಿ ತೊಗರಿ ಖರೀದಿಯಲ್ಲಿ ಮಧ್ಯವರ್ತಿಗಳು ಭಾಗವಹಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ ಆದರೆ ಇದರಿಂದ ರೈತರಿಗೆ ಲಾಭವಾಗುತ್ತಿಲ್ಲ ಎಂದು ಸರ್ಕಾರದ ಗಮನಕ್ಕೆ ತಂದರು.

ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಶೀಘ್ರದಲ್ಲಿ ಆದೇಶ ಹೊರಡಿಸಿ ೨೦ ಕ್ವಿಂಟಲ್ ಖರೀದಿಗೆ ಅವಕಾಶ ಮಾಡಿಕೊಡಬೇಕು. ಒಂದು ವೇಳೆಯಲ್ಲಿ ಇದರಲ್ಲಿ ವಿಳಂಬ ನೀತಿ ಅನುಸರಿಸಿದರೇ ಮುಖ್ಯಮಂತ್ರಿಗಳ ಘೋಷಣೆ ಬರೀ ಘೋಷಣೆಯಾಗಿ ಉಳಿಯುತ್ತದೆ ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಆದೇಶ ಹೊರಡಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here