ಸುರಪುರ: ತಾಲೂಕಿನ ದೇವಾಪುರ ಕ್ರಾಸ್‌ದಿಂದ ಹುಣಸಗಿಗೆ ಹೋಗುವ ದೇವಾಪುರ-ಮನಗೂಳಿ ರಾಜ್ಯ ಹೆದ್ದಾರಿಯಲ್ಲಿ ನಾಗರಾಳ ದಿಂದ ಕೋನಾಳವರೆಗಿನ ರಸ್ತೆ ಹದಗೆಟ್ಟಿದ್ದರಿಂದ ಪ್ರತಿನಿತ್ಯ ನೂರಾರು ವಾಹನಗಳ ಸವಾರರು ಹಾಗೂ ಪ್ರಯಾಣಿಕರು ತೊಂದರೆ ಅನುಭವಿಸುಂತಾಗಿದ್ದು ಕೂಡಲೇ ಹದಗೆಟ್ಟಿರುವ ಈ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿ ಮಾ೯ ರಂದು ದೇವಾಪುರ ಕ್ರಾಸ್ ಬಳಿ ರಸ್ತೆ ತಡೆ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ತಿಳಿಸಿದ್ದಾರೆ.
ತಾಲೂಕಿನಿಂದ ವಿಜಯಪೂರ, ಬಾಗಲಕೋಟೆ, ಮೀರಜ್ ಸೇರಿದಂತೆ ರಾಜ್ಯದ ಹಾಗೂ ಹೊರ ರಾಜ್ಯದ ಊರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ನಾಗರಾಳ ಗ್ರಾಮ ದಿಂದ ಕೋನಾಳವರೆಗೆ ಇರುವ ೫ಕಿ.ಮೀ ಉದ್ದದ ರಸ್ತೆಯು ಈ ಗ್ರಾಮಗಳ ರೈತರು ಪರಿಹಾರಕ್ಕಾಗಿ ಹೋರಾಟ ಮಾಡಿದ್ದರಿಂದ ಕಾಮಗಾರಿಯನ್ನು ಗುತ್ತಿಗೆದಾರರು ನಿಲ್ಲಿಸಿ ಉಳಿದ ಕಡೆಗಳಲ್ಲಿ ರಸ್ತೆ ಕಾಮಗಾರಿಯನ್ನು ಕೈಗೊಂಡಿದ್ದಾರೆ ಅರ್ಧಕ್ಕೆ ನಿಂತಿರುವ ೫ಕಿ.ಮೀ ಅಂತರದ ರಸ್ತೆಯು ಸಂಪೂರ್ಣ ತಗ್ಗು-ದಿನ್ನೆಗಳಿಂದ ಕೂಡಿದ್ದು ಇದನ್ನು ಕ್ರಮಿಸಲು ವಾಹನಗಳ ಸವಾರರು ಹಾಗೂ ಪ್ರಯಾಣಿಕರು ಪ್ರತಿನಿತ್ಯ ಪರದಾಡುವಂತಾಗಿದ್ದು ಹೆಚ್ಚು ಸಮಯ ತೆಗೆದುಕೊಳ್ಳುವಂತಾಗಿದೆ ಕೂಡಲೇ ಅಪೂರ್ಣಗೊಂಡಿರುವ ಈ ಕಾಮಗಾರಿಯನ್ನು ಪೂರ್ತಿಗೊಳಿಸಲು ಜಿಲ್ಲಾಡಳಿತ ಮಧ್ಯಸ್ಥಿಕೆ ವಹಿಸಿ ತೀವ್ರಗತಿಯಲ್ಲಿ ರೈತರ ಬೇಡಿಕೆ ಬಗ್ಗೆ ಕ್ರಮ ಕೈಗೊಂಡು ತುರ್ತಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಓಡಾಡಲು ಅನುಕೂಲ ಮಾಡಿಕೊಡಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ, ಮನವಿಗೆ ಸ್ಪಂದಿಸದಿದ್ದಲ್ಲಿ ಮಾ೯ ರಂದು ದೇವಾಪುರ ಕ್ರಾಸ್ ಬಳಿ ರಸ್ತೆತಡೆ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ತಾಲೂಕು ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಮಳ್ಳಳ್ಳಿ ತಿಳಿಸಿದ್ದಾರೆ.
Good Sir
Super Sir Good