ವಿಶ್ವ ರೆಡ್ ಕ್ರಾಸ್ ದಿನಾಚರಣೆ

0
89

ಕಲಬುರಗಿ: ರೆಡ್‌ಕ್ರಾಸ್ ಸಂಸ್ಥೆಯು ಜಿಲ್ಲಾ ಮಟ್ಟದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಸಂಸ್ಥೆಯ ಸಮಾಜ ಸೇವಾ ಕಾರ್ಯಚಟುವಟಿಕೆಗಳಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತೆ ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಅವರು ಬುಧವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಕಲಬುರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ನಗರದ ಹೊಸ ಆರ್.ಟಿ.ಓ. ಕಚೇರಿ ಹತ್ತಿರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ರೆಡ್‌ಕ್ರಾಸ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ, ಈ ರೆಡ್‌ಕ್ರಾಸ್ ಸಂಸ್ಥೆಯು ಸಾಮಾಜಿಕ ಕಾಳಜಿಯಿಂದ ಕೆಲಸ ಮಾಡುತ್ತಿದೆ. ಹೆನ್ರಿ ಡ್ಯಾನಾಂಟ್ ಅವರ ಜನ್ಮ ದಿನವಾದ ಮೇ ೮ ರಂದು ರೆಡ್‌ಕ್ರಾಸ್ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಉತ್ತಮ ಸಮಾಜ ಕಾರ್ಯಗಳ ಮೂಲಕ ನಾವು ಈ ದಿನದಂದು ಅವರಿಗೆ ಸಲ್ಲಿಸುವ ಗೌರವವಾಗಿದೆ ಎಂದರು. ಕಲಬುರಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ನಿರ್ದೇಶಕ ಡಾ. ಬಸವರಾಜ ಗಾದಗೆ ಮಾತನಾಡಿದರು.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಕಲಬುರಗಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಸಭಾಪತಿ ಅಪ್ಪಾರಾವ ಅಕ್ಕೋಣೆ ಈ ಸಂಸ್ಥೆಗೆ ಎಲ್ಲರೂ ಸಹಾಯ, ಸಹಕಾರ ನೀಡಿದ್ದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ರೆಡ್ ಕ್ರಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಇನ್ನೂ ಉತ್ತಮ ಫಲಿತಾಂಶಗಳನ್ನು ಪಡೆಯಲು ಸಾಧ್ಯ ಎಂದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಭಾಗ್ಯಲಕ್ಷ್ಮಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಉಗಮ, ಧ್ಯೇಯೋದ್ದೇಶ ಮತ್ತು ಸಂಸ್ಥೆಯ ಹಿನ್ನೆಲೆಯನ್ನು ಸವಿಸ್ತಾರವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ 2018-19ನೇ ಸಾಲಿನ ಜ್ಯೂನಿಯರ್ ರೆಡ್‌ಕ್ರಾಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಬಸವ ಪ್ರಸಾದ ಹಾಗೂ ವೈಷ್ಣವಿ ಎಸ್.ಜಿ ಹಾಗೂ ಪ್ರಕೃತಿ ಅವರನ್ನು ಸನ್ಮಾನಿಸಲಾಯಿತು. ೨೦೧೮-೧೯ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ರೆಡ್‌ಕ್ರಾಸ್ ಕಾರ್ಯಕ್ರಮಗಳನ್ನು ಏರ್ಪಡಿಸಲು ಹೆಚ್ಚಿನ ಸಹಕಾರ ನೀಡಿದ ಡಾ. ಸಿ. ಸೋಮಶೇಖರ, ಡಾ. ನಂದಗಿ ರಾಚಪ್ಪ, ಡಾ. ಪದ್ಮಣ್ಣ ರಾಸಣಗಿ, ಡಾ. ಚಿತ್ರಲೇಖಾ ಆಲೂರ, ಡಾ. ಪಿ.ಎಂ. ಮಠ, ಡಾ. ಸ್ವರೂಪ್ ರಂಜನ್ ಹಾಗೂ ಚಿದಾನಂದ ಬಳುರ್ಗಿ ಅವರನ್ನು ಸಹ ಸನ್ಮಾನಿಸಲಾಯಿತು.
ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಅರುಣಕುಮಾರ ಲೋಯಾ, ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ, ಪದಾಧಿಕಾರಿಗಳಾದ ಜಿ.ಎಸ್. ಪದ್ಮಾಜಿ, ಧನರಾಜ ಭಾಸಗಿ, ಡಾ. ಶಶಿಕಾಂತ ಮಜ್ಜಗೆ, ವಿಶ್ವನಾಥ ಕೋರವಾರ, ಶಾರದಾ ಯಾಕಾಪೂರ ಸೇರಿದಂತೆ ವಿಟಿಯುನ ಎಲ್ಲಾ ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿ.ಟಿ.ಯು.ನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಪ್ರೊ. ಶಂಭುಲಿಂಗಪ್ಪ ಕಾರ್ಯಕ್ರಮ ನಿರೂಪಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here