ಸುರಪುರ: ನಗರದ ನಗರಸಭೆ ಬಳಿಯ ಪೆಟ್ರೋಲ್ ಬಂಕ್ ಹಿಂಬದಿಯ ಜಾಲಿ ಗಿಡಗಳ ಪೊದೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.ಮೇಲ್ನೊಟಕ್ಕೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ರೀತಿ ಕಂಡು ಬರುತ್ತಿದ್ದು,ಕೊಲೆಯ ಕಾರಣ ತಿಳಿದು ಬಂದಿಲ್ಲ.
ಸುಮಾರು ಮೂವತ್ತೈದರಿಂದ ನಲವತ್ತು ವರ್ಷದ ಮಹಿಳೆ ಮುಖದ ಮೇಲೆ ಕಲ್ಲು ಎತ್ತಿ ಹಾಕಿದ್ದರಿಂದ ಗುರುತು ಸಿಗದ ರೀತಿಯಲ್ಲಿ ಕೊಲೆ ಮಾಡಲಾಗಿದೆ.ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರಬಹುದೆಂದು ಶಂಕೆ ವ್ಯಕ್ತವಾಗುತ್ತಿದ್ದು,ಶವ ಬಿದ್ದಿರುವ ರೀತಿ ನೊಡಿದಲ್ಲಿ ಅತ್ಯಾಚಾರ ನಡೆದ ಬಗ್ಗೆ ಅನುಮಾನ ವ್ಯಕ್ತವಾಗುತ್ತದೆ.ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದು ಕೊಲೆಗೆ ಕಾರಣ ಮತ್ತು ಮಹಿಳೆ ಯಾರು ಎನ್ನುವ ಬಗ್ಗೆ ಇನ್ನಷ್ಟೆ ತಿಳಿದುಬರಬೇಕಿದೆ.