ಅವ್ವ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ

0
75

ಕಲಬುರಗಿ: ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನ ಡೊಂಗರಗಾಂವ ವತಿಯಿಂದ ವಡ್ಡನಕೇರಿ ಕುಟುಂಬ ಕೊಡ ಮಾಡುವ 4ನೇ ವರ್ಷದ ಅವ್ವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ ಮುಂದೂಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಶರಣಬಸಪ್ಪ ವಡ್ಡನಕೇರಿ ತಿಳಿಸಿದ್ದಾರೆ.

ಈ ಮುಂಚೆ ನಿಗದಿಯಾದಂತೆ ಮಾ. 15ರಂದು ಬೆಳಗ್ಗೆ 10.30ಕ್ಕೆ ಕಲಬುರಗಿಯ ಕಲಾ ಮಂಡಳದಲ್ಲಿ ನಡೆಯಬೇಕಿತ್ತು. ಆದರೆ ಕರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದನ್ವಯ ಈ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಕಾರ್ಯಕ್ರಮ ನಡೆಯುವ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here