ಕಲಬುರಗಿ: ಕೊರೋನಾ ವೈರಸ್ ಕುರಿತು ಸಾರ್ವಜನಿಕರು ಭಯಭೀತರಾಗದೆ ಕೆಳಕಂಡಂತೆ ಅಗತ್ಯ ಮುನ್ನೆಚರಿಕೆ ಕ್ರಮ ವಹಿಸಬಹುದಾಗಿದೆ.
ಏನು ಮಾಡಬೇಕು:
-
ಆಗಾಗ ಸಾಬೂನು ಮತ್ತು ನೀರಿನಿಂದ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳುವ ಅಭ್ಯಾಸ ಮಾಡಿಕೊಳ್ಳಬೇಕು.
-
ರೋಗದ ಲಕ್ಷಣಗಳಾದ ಜ್ವರ, ನೆಗಡಿ/ ಕೆಮ್ಮು, ಉಸಿರಾಟದ ತೊಂದರೆಯಾಗುತ್ತಿದಲ್ಲಿ ಮೂಗು ಮತ್ತು ಬಾಯಿಯನ್ನು ಕರವಸ್ತ್ರ ಅಥವಾ ಮಾಸ್ಕ್‌ಗಳಿಂದ ಮುಚ್ಚಿಕೊಂಡು ತಕ್ಷಣ ವೈದ್ಯರನ್ನು ಭೇಟಿ ಮಾಡುವುದು.
-
ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರ ಅಥವಾ ಮಾಸ್ಕ್‌ಗಳಿಂದ ಮುಚ್ಚಿಕೊಳ್ಳಬೇಕು.
-
ಬಳಸಿದ ಟಿಶ್ಯೂ, ಕರವಸ್ತ್ರ ತಕ್ಷಣವೇ ಮುಚ್ಚಿದ ತೊಟ್ಟಿಯಲ್ಲಿಡಬೇಕು.
-
ರೋಗದ ಲಕ್ಷಣಗಳು ಮತ್ತು ಚಿಹ್ನೆಗಳಿದ್ದರೆ 24/7 ಆರೋಗ್ಯ ಸಹಾಯವಾಣಿ ೧೦೪ಕ್ಕೆ ಕರೆ ಮಾಡಿ ಸಹಾಯ ಪಡೆಯಬಹುದು.
-
ದೊಡ್ಡ ಸಭೆ-ಸಮಾರಂಭಗಳಿಗೆ ಭಾಗವಹಿಸುವುದನ್ನು ತಪ್ಪಿಸುವುದು.
ಏನು ಮಾಡಬಾರದು:
- ನಿಮಗೆ ಕೆಮ್ಮು ಮತ್ತು ಜ್ವರ ಕಂಡುಬಂದರೆ ಬೇರೆಯವರೊಡನೆ ನಿಕಟ ಸಂಪರ್ಕ ಹೊಂದಬಾರದು.
- ನಿಮ್ಮ ಕಣ್ಣುಗಳು, ಮೂಗು, ಬಾಯಿಯನ್ನು ಆಗಿಂದಾಗ್ಗೆ ಸ್ಪರ್ಶಿಸಬಾರದು.
- ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.