ಕಲಬುರಗಿ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಜಿಲ್ಲೆಯ ಹಲವು ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಕೂಡಾ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.
ಜಿಲ್ಲೆಯ ಲಾಡ್ಲಾಪೂರ ಸೇರಿದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೂರು ದಿನಗಳಿಂದ ಉದ್ಯೋಗ ಖಾತ್ರಿ ಕೆಲಸ ಬಂದ್ ಮಾಡಿದ್ದು, ಕಾರ್ಮಿಕರಿಗೆ ಕುಟುಂಬ ನಿರ್ವಾಹಣೆ ಸಮಸ್ಯೆ ಎದುರಾಗಿದೆ. ಈ ಕುರಿತು ಪಂಚಾಯತ್ ಅಧಿಕಾರಿಗಳನ್ನು ಕೇಳಿದ್ರೆ, ಕೂಲಿ ಕಾರ್ಮಿಕರು ಕೊರೊನಾಗೆ ಹೆದರಿ ಕೆಲಸಕ್ಕೆ ಬರುತ್ತಿಲ್ಲ. ನಾವು ಕೆಲಸ ಪ್ರಾರಂಭಿಸಲು ಸಿದ್ಧರಿದ್ದೇವೆ ಅಂತಾರೆ.
ಗ್ರಾಮೀಣ ಪ್ರದೇಶದ ಬಡ ಕೂಲಿಕಾರರಿಗೆ ಆಸರೆಯಾಗಿದ್ದ ಉದ್ಯೋಗ ಖಾತ್ರಿ ಕೂಡ ಕಳೆದ ನಾಲ್ಕು ದಿನಗಳಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ ಜಿಲ್ಲೆಯ ಹಲವು ಕಾಮಗಾರಿಗಳು ಕಾರ್ಮಿಕರಿಲ್ಲದೆ ಬಿಕೋ ಎನ್ನುತಿವೆ. ಉದ್ಯೋಗ ಖಾತ್ರಿ ನಂಬಿ ಜೀವನ ಸಾಗಿಸುತ್ತಿದ್ದ ಹಲವು ಕುಟುಂಬಗಳು ಜೀವನ ಸಾಗಿಸಲು ಸೆಣಸಾಡುವ ಪರಿಸ್ಥಿತಿ ಎದುರಾಗಿದೆ.