ಆಳಂದ :ಕೊರೋನಾ ಮಾರಕ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಮುಂಜಾಗೃತಾ ಕ್ರಮವಾಗಿ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳ ಬೋಧಕ ಬೋಧಕೇತರ ಸಿಬ್ಬಂದಿಗಳಿಗೆ ಮಾರ್ಚ 31ರ ವರೆಗೆ ರಜೆ ಘೋಷಿಸಲಾಗಿದೆ.
ಈ ಮೊದಲು ಪ್ರಾಥಮಿಕ ಶಾಲೆಯಿಂದ ಪಿಯುಸಿ ವರೆಗಿನ ಶಿಕ್ಷಕರು, ಅಧ್ಯಾಪಕರಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಮಾಜಿ ಪ್ರಾಚಾರ್ಯ ಬಿ ಡಿ ಮಾಲಿಪಾಟೀಲ ಅವರು ಈ ಕುರಿತು ವಿಪ ಸದಸ್ಯ ಶರಣಪ್ಪ ಮಟ್ಟೂರ ಅವರೊಂದಿಗೆ ಮಾತುಕತೆ ನಡೆಸಿ ಪದವಿ ಕಾಲೇಜಿನ ಸಿಬ್ಬಂದಿಗಳಿಗೂ ಸಹ ರಜೆ ನೀಡುವಂತೆ ರವಿವಾರ ರಾತ್ರಿ ಮನವಿ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿ ಪದವಿ ಕಾಲೇಜು ಸಿಬ್ಬಂದಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಬಿ ಡಿ ಮಾಲಿಪಾಟೀಲ ತಿಳಿಸಿದ್ದಾರೆ.