ಕಾರ್ಮಿಕರಿಗೆ ತಮ್ಮದೇ ಆದ ಕಾನೂನು ಇದೆ: ಎಸ್.ಎ.ಖಾಜಿ

0
49

ಕಾರವಾರ: ಪ್ರತಿಯೊಬ್ಬ ಕಾರ್ಮಿಕರಿಗೆ ತಮ್ಮದೇ ಆದ ಕಾನೂನು ಇದೆ. ಇದರ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಕಾನೂನಿನ ಬಗ್ಗೆ ಮೊದಲೇ ತಿಳಿದುಕೊಂಡಿದ್ದರೆ ಯಾವುದೇ ಕ್ಷೇತ್ರದಲ್ಲಿ ತಮಗೆ ಅನ್ಯಾಯವಾದಾಗ ಪರಿಹಾರ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಇದಕ್ಕೆ ಸಂಬಂಧ ಪಟ್ಟ ನ್ಯಾಲಯದಲ್ಲಿ ದೂರನ್ನು ಸಲ್ಲಿಸಿ ತಮಗೆ ಆದ ಅನ್ಯಾಯದ ವಿರುದ್ಧ ಹೋರಾಡ ಬಹುದಾಗಿದೆ. ಆದ್ದರಿಂದ ಕಾರ್ಮಿಕರಿಗೆ ಕಾನೂನಿನ ಅರಿವು ಅಗತ್ಯ ಎಂದು ಜಿಲ್ಲಾ ವಕೀಲರ ಸಂಘದ ಕಾರ್‍ಯದರ್ಶಿಯಾದ ಎಸ್.ಎ.ಖಾಜಿ ತಿಳಿಸಿದರು.

ಅವರು ಆಝಾದ್ ಯುಥ್ ಕ್ಲಬ್ ಕಾರವಾರ ಹಾಗೂ ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್ ಕಾರವಾರದವರು ಸಂಯುಕ್ತವಾಗಿ ‘ವಿಶ್ವ ಕಾರ್ಮಿಕ ದಿನಾಚರಣೆ’ಯ ನಿಮಿತ್ತ ಕಾರವಾರದ ಕನ್ನಡ ಭವನದಲ್ಲಿ ಹಮ್ಮಿಕೊಂಡ ಸನ್ಮಾನ ಕಾರ್‍ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಸನ್ಮಾನವನ್ನು ನೆರವೇರಿಸಿಕೊಟ್ಟು ಮಾತನಾಡಿದರು.

Contact Your\'s Advertisement; 9902492681

ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕಾರವಾರದ ಅಧ್ಯಕ್ಷರಾದ ಲ.ಸಮೀರ್ ಸಕ್ಸೇನ ಮಾತನಾಡಿ ಕಾರ್ಮಿಕರು ತಮ್ಮ ಶ್ರಮವನ್ನು ದೇಶಕ್ಕಾಗಿ ಅರ್ಪಣೆ ಮಾಡಿದ ತ್ಯಾಗಿಗಳು ಅವರನ್ನು ಗೌರವಿಸುವುದು ಉತ್ತಮ ಕಾರ್‍ಯ ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರವಾರ ತಾಲೂಕಿನ ಅಧ್ಯಕ್ಷರಾದ ನಾಗರಾಜ ಹರಪನಹಳ್ಳಿ ಮಾತನಾಡಿ ಕಾರ್ಮಿಕರು ನಗರದ ಉಸಿರು. ಅವರಿಲ್ಲದೇ ನಗರದ ಅಭಿವೃದ್ಧಿ ಸಾಧ್ಯವಿಲ್ಲ. ಎಲ್ಲರಿಗೂ ಸಮಾನವಾದ ಗೌರವವನ್ನು ನೀಡಬೇಕು ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ವಿನಾಯಕ ಗಂಗೊಳ್ಳಿ ಮಾತನಾಡಿ ನಮ್ಮ ಸಮಾಜದ ಅಭಿವೃದ್ಧಿಗಾಗಿ ದುಡಿಯುವವರನ್ನು ಗುರುತಿಸಿ ಅವರ ಸಾಧನೆಗಾಗಿ ಸನ್ಮಾನಿಸುವುದು ಒಂದು ಮಹತ್ತರವಾದ ಕಾರ್‍ಯ. ಕಾರ್ಮಿಕರು ದೇಶದ ಅಭಿವೃದ್ಧಿಯ ಮುಖ್ಯ ರುವಾರಿಗಳು ಎಂದು ಹೇಳಿದರು. ರಾಷ್ಟ್ರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ನಜೀರ್ ಅಹಮದ್ ಯು.ಶೇಖ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ 1990 ರಿಂದ ನಗರ ಸಭೆ ಕಾರವಾರದಲ್ಲಿ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಸುಬ್ಬಯ್ಯ ರಾಮಾ ನಾಯ್ಕ ರವರಿಗೆ ಅವರು 29 ವರ್ಷದಲ್ಲಿ ಸೇವೆ ಮಾಡಿದ ಸಾಧನೆಗೆ ಗೌರವಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here