ಕಲಬುರಗಿ: ಕೊರೋನಾ ಸೋಂಕಿನಿಂದ ಮೃತರಾದ ಕಲಬುರಗಿಯ ವಯೋವೃದ್ಧನಿಗೆ ಚಿಕಿತ್ಸೆ ನೀಡಿದ 63 ವರ್ಷದ ವೈದ್ಯ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿ.ಸಿ. ಶರತ್‌ಬಿ. ತಿಳಿಸಿದ್ದಾರೆ.
ಮೃತ ವೃದ್ಧನ ನೇರ ಸಂಪರ್ಕದಲ್ಲಿ ಬಂದಿದ್ದರಿಂದ ಇವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಕಲಬುರಗಿ ಇ.ಎಸ್.ಐ.ಸಿ ಮೆಡಿಕಲ್ ಕಾಲೇಜಿನ ಐಸೋಲೇಷನ್ ವಾರ್ಡ್ ನಲ್ಲಿಟ್ಟು ತೀವ್ರ ನಿಗಾದಡಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕಿತ್ಸೆಯ 14 ದಿನಗಳ ನಂತರ ಸದರಿ ವ್ಯಕ್ತಿಗೆ ಕೋವಿಡ್-19 ಪರೀಕ್ಷೆ ಮಾಡಿದಾಗ ನೆಗೆಟಿವ್ ಕಂಡುಬಂದಿದೆ. 24 ಗಂಟೆ ನಂತರ ಮತ್ತೊಮ್ಮೆ ಪರೀಕ್ಷಿಸಿದಾಗ ಸಹ ನೆಗೆಟಿವ್ ವರದಿ ಬಂದಿರುತ್ತದೆ ಎಂದು ಡಿ.ಸಿ. ಶರತ್ ಬಿ. ಅವರು ಮಂಗಳವಾರ ತಿಳಿಸಿದ್ದಾರೆ.