ಕಲಬುರಗಿ: ಅಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ ಬಿರಾದಾರ ತಮ್ಮ ಮೂರೂವರೆ ಎಕರೆ ಭೂಮಿಯಲ್ಲಿ ಕಲ್ಲಂಗಡಿ ಹಣ್ಣು ಬೆಳೆದು ಮಾರಾಟ ಮಾಡಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟಕಗಿ ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಮಾರುತಿ ಮಾನ್ಪಡೆ ಆಗ್ರಹಿಸಿದ್ದಾರೆ.
ಅವರು ಇಂದು ರೈತ ಮುಖಂಡರೊಂದಿಗೆ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ನಂತರ ಮಾತನಾಡಿ ಅವರು ಕೂಡಲೇ ಸರ್ಕಾರ ಚಂದ್ರಕಾಂತ ಬಿರಾದಾರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಅವರ ಬ್ಯಾಂಕ್ ಸಾಲ ಮನ್ನಾ ಮಾಡಿ, ಆತ್ಮಹತ್ಯೆ ಮಾಡಿಕೊಂಡ ರೈತ ಬೆಳೆದ ಕಲ್ಲಂಗಡಿ ಹಣ್ಣು ತೋಟಗಾರಿಕೆ ಇಲಾಖೆ ಹಾಪ್ ಕಾಮ್ಸ್ ಮೂಲಕ 10 ರೂ. ಕೆಜಿಯಂತೆ ಖರೀದಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಧಾಮ ಧನ್ನಿ, ಪಾಂಡುರಂಗ ಮಾವಿನಕರ ಇದ್ದರು.