ಹೋಂ ಕ್ವಾರಂಟೈನ್ ತಪಾಸಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ

0
144

ಕಲಬುರಗಿ: ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಹೋಂ ಕ್ವಾರಂಟೈನ್‍ನಲ್ಲಿರುವ ವ್ಯಕ್ತಿಗಳ ಆರೋಗ್ಯ ತಪಾಸಣೆಗೆ ಪ್ರತಿದಿನ ಮನೆ-ಮನೆಗಳಿಗೆ ಬರುವ ಆರೋಗ್ಯ ಸಿಬ್ಬಂದಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಒಂದು ವೇಳೆ ಸಹಕಾರ ನೀಡದೆ ಆರೋಗ್ಯ ಸಿಬ್ಬಂದಿಗಳ ಕೆಲಸಗಳಿಗೆ ಅಡ್ಡಿಪಡಿಸಿದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಶರತ್ ಬಿ. ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ಸೋಂಕಿತ ವ್ಯಕ್ತಿಗಳ ಪ್ರಥಮ ಅಥವ ಎರಡನೇ ಸಂಪರ್ಕದಲ್ಲಿ ಬಂದಿರುವ, ವಿದೇಶದಿಂದ ಮರಳಿರುವ ಅಥವಾ ಇತ್ತೀಚೆಗೆ ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ವ್ಯಕ್ತಿಗಳನ್ನು ಮುಂಜಾಗ್ರತವಾಗಿ ಗೃಹ ಬಂಧನದಲ್ಲಿರಿಸಿ ತೀವ್ರ ನಿಗಾ ವಹಿಸಲಾಗುತ್ತಿದೆ. ಇವರ ಆರೋಗ್ಯ ತಪಸಣೆಗೆಂದೇ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ತಂಡಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕರು ದಿನನಿತ್ಯ ಮನೆಗಳಿಗೆ, ನಿವಾಸಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Contact Your\'s Advertisement; 9902492681

ಇದಕ್ಕೆ ಕಲಬುರಗಿ ಜಿಲ್ಲೆಯ ಹೋಂ ಕ್ವಾರಂಟೈನ್‍ನಲ್ಲಿರುವ ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here