ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್ ಯಡಿಯೂರಪ್ಪಅವರು ತಮ್ಮ ಚುನಾವಣೆ ಪ್ರಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.
ಲಿಂಗಾಯತರು ಕಾಂಗ್ರೆಸ್ಗೆ ಮತ ನೀಡಿದರೆ ಅಪರಾಧ ಮಾಡಿದಂತೆ ಎಂದು ತಮ್ಮ ಚುನಾವಣೆ ಪ್ರಚಾರದ ವೇಳೆ ಯಡಿಯೂರಪ್ಪ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಸಮುದಾಯವನ್ನ ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಆಯೋಗಕ್ಕೆ ದೂರು ದಾಖಲಿಸಲಾಗಿದೆ.