ಕಲಬುರಗಿ: ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ ಅವರು ಗುರುವಾರ ಆಳಂದ ತಾಲೂಕಿನ ಬೆಳಮಗಿ ಗ್ರಾಮದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು.
ಮನೆ-ಮನೆಗೆ ತೆರಳಿ ಮಾಸ್ಕ್ ವಿತರಿಸಿ ಮಾತನಾಡಿದ ಅಧ್ಯಕ್ಷರು ಸಾರ್ವಜನಿಕರು ಅನಗತ್ಯ ಮನೆಯಿಂದ ಹೊರಗಡೆ ಬರಬೇಡಿ. ಕೊರೋನಾ ಸೋಂಕು ತಡೆಯಲು ಮನೆಯಲ್ಲಿರುವುದು ಮತ್ತು ಸಾಮಾಜಿಕ ಅಂತರವೇ ಮದ್ದಾಗಿದೆ. ಎಲ್ಲರು ಇದನ್ನು ಅನುಸರಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.
ಇನ್ನೂ ಯಾರಾದರೂ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಅನುಭವಿಸುತ್ತಿದ್ದಲ್ಲಿ ಕೂಡಲೆ ಸಮೀಪದ ಸರಕಾರಿ ಆಸ್ಪತ್ರೆಗೆ ಹೊಗಿ ಚಿಕಿತ್ಸೆ ಪಡೆಯಬೇಕು ಹಾಗೂ ಮಹಾಮಾರಿ ಕೋವಿಡ್-19 ವಿರುದ್ಧ ಹೋರಾಡಲು ಸರ್ಕಾರದ ಸೂಚನೆಗಳು ತಪ್ಪದೆ ಪಾಲಿಸುವ ಮೂಲಕ ಸಹಕರಿಸಬೇಕು ಎಂದರು.