ಕಲಬುರಗಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ: ಸಚಿವ ಶ್ರೀರಾಮಲು ಸುಳಿವು

0
83

ಬೆಂಗಳೂರು: ಕರ್ನಾಟಕದಲ್ಲಿ ೧೮ ಜಿಲ್ಲೆಗಳನ್ನು ಕೊರೋನಾ ಹಾಟ್‌ಸ್ಪಾಟ್ ಕೇಂದ್ರಗಳು ಎಂದು ಗುರುತಿಸಲಾಗಿದೆ. ಆದ್ದರಿಂದ ಈ ಎಲ್ಲ ಜಿಲ್ಲೆಗಳಲ್ಲಿಯೂ ಲಾಕ್‌ಡೌನ್ ಮುಂದುವರೆಸುವ ಕುರಿತೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಏಪ್ರಿಲ್ ೧೧ರಂದು ಕೇಂದ್ರದ ನಿರ್ಧಾರ ಪ್ರಕಟಿಸುತ್ತಾರೆ. ಅದಕ್ಕಾಗಿ ಕಾಯುತ್ತಿದ್ದೇವೆ. ನಂತರ ರಾಜ್ಯ ಸರ್ಕಾರವು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮಲು ಅವರು ಇಲ್ಲಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಏನೇ ನಿರ್ಧಾರ ಪ್ರಕಟಿಸಿದರೂ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಲಾಕ್‌ಡೌನ್ ಮುಂದುವರಿಸಬೇಕೆಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದರು.

Contact Your\'s Advertisement; 9902492681

ರಾಜ್ಯದ ೧೭ ಜಿಲ್ಲೆಗಳಿಗೆ ಈಗಾಗಲೇ ಭೇಟಿ ನೀಡಿದ್ದೇನೆ. ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ನಮ್ಮ ಕರ್ನಾಟಕ ಸುಧಾರಿಸಿದೆ. ಏನೇ ಆಗಲಿ ರಾಜ್ಯದ ನಾಲ್ಕು ಜಿಲ್ಲೆಗಳಾದ ಮೈಸೂರು, ಬೆಂಗಳೂರು, ಕಲಬುರಗಿ ಮತ್ತು ಬೀದರ್‌ನಲ್ಲಿ ಲಾಕ್‌ಡೌನ್ ಮುಂದುವರೆಸುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಸಧ್ಯ ೫೦೦೦ ರ‍್ಯಾಪಿಡ್ ಕಿಟ್‌ಗಳನ್ನು ಖರೀದಿ ಮಾಡಲಾಗಿದೆ. ರ‍್ಯಾಪಿಡ್ ಪರೀಕ್ಷೆಯನ್ನು ಆರಂಭಿಸಲಾಗಿದೆ. ಇಡೀ ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳು ಮಾತ್ರ ಡೇಂಜರ್ ಎನ್ನಬಹುದು. ನಮ್ಮ ನಿರ್ಧಾರವೂ ಪ್ರಧಾನಿಯವರ ಆಧೆಶದ ಮೇಲೆ ನಿಂತಿದೆ. ಮುಂದೆಯೂ ರಾಜ್ಯದ ನಾಲ್ಕು ಡೇಂಜರ್ ಜೋನ್ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರೆಸುವ ಕುರಿತು ಅಭಿಪ್ರಾಯ ಕೇಳಿಬಂದಿದೆ ಎಂದು ಅವರು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here