ಕಲಬುರಗಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 38 ವರ್ಷದ ಆಯಾಗೂ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ತಿಳಿಸಿದ್ದಾರೆ.
ಅವರು ಇಂದು ಕಲಬುರಗಿಯಲ್ಲಿ ಕೋವಿಡ್-19 ನಿಯಂತ್ರಣದ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಗೆ ಆಗಮಿಸಿ ಮಾತನಾಡಿ, ಇತ್ತೀಚಿಗೆ ಕಲಬುರಗಿಯಲ್ಲಿ ವೈರಸ್ ನಿಂದ ಮೃತಪಟ್ಟ 55 ವರ್ಷದ ಎರಡನೇ ವ್ಯಕ್ತಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಯ ಆಯಾಗೂ ಸೋಂಕು ತಗಲಿರುವ ಬಗ್ಗೆ ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಡಿಸಿಎಂ ಕಾರಜೋಳ ತಿಳಿಸಿದ್ದಾರೆ.
ಎರಡನೇ ವ್ಯಕ್ತಿ ಮೃತಪಟ್ಟದ ನಂತರ ಈ ಖಾಸಗಿ ಆಸ್ಪತ್ರೆ ಸಂಪೂರ್ಣ ಲಾಕ್ ಡೌನ್ ಮಾಡಿ ಮುಚ್ಚಲಾಗಿತ್ತು. ಜಿಲ್ಲಾಡಳಿತ ಮೃತ ಸೋಂಕು ಪೀಡಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಯ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಂದು ಆಯಾಗೂ ಓರ್ವರರಿಗೆ ವೈರಸ್ ತಗುಲಿರುವುದು ದೃಢಪಟ್ಟಿದೆ.