ಕಲಬುರಗಿ: ಮೂಲಸೌಕರ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್ ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊರೋನಾ ವೈರಸ್ (ಕೋವಿದ್-19)ಕುರಿತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
ಈಶಾನ್ಯ ವಲಯ ಐಜಿಪಿ ಮನೀಷ್ ಖರ್ಬೀಕರ್ , ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್.ಸತೀಶ್ ಕುಮಾರ್, ಜಿಲ್ಲಾಧಿಕಾರಿ ಶರತ್.ಬಿ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ. ರಾಜಾ,ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬ ನ್ಯಾಂಗ್, ಡಿಸಿಪಿ ಕಿಶೋರ ಬಾಬು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.