ಕಲಬುರಗಿ: ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಅವರು ಸೋಮವಾರ ಕಲಬುರಗಿ ನಗರದ ಜಿಮ್ಸ್ ಮತ್ತು ಬಸವೇಶ್ವರ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಸಕ್ರಿಯರಾಗಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಆತ್ಮಸ್ಥೈರ್ಯ ತುಂಬಿದರು.
ಇದಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೂ ಭೇಟಿ ನೀಡಿದ ಡಾ.ಉಮೇಶ ಜಾಧವ ಅವರು ಡಿಎಚ್ಒ ಡಾ.ಎಂ.ಎ.ಜಬ್ಬಾರ್ ಅವರೊಂದಿಗೆ ಕೊರೋನಾ ತಡೆಗಟ್ಟಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಿದರು.