ಕಲಬುರಗಿ: ಸಂವಿಧಾನ ಶಿಲ್ಪಿ ಹಾಗೂ ಭಾರತದ ಭಾಗ್ಯ ವಿಧಾತ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವುದರಿಂದ ಸಂವಿಧಾನ ಶಿಲ್ಪಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡುವುದರೊಂದಿಗೆ ಸರಳವಾಗಿ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಎಸ್.ಪಿ. ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಭಕ್ಷ, ಎಸಿಪಿ ವಿಜಯಕುಮಾರ, ಎಸ್.ಸಿ.ಎಸ್.ಟಿ. ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನೌಕರ ಬಾಂಧವರು ಸಹ ಉಪಸ್ಥಿತರಿದ್ದು ಸಂವಿಧಾನ ಪಿತಾಮಹನಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಜನಪ್ರತಿನಿಧಿಗಳಿಂದಲೂ ಗೌರವ ನಮನ: ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಶಾಸಕರಾದ ಡಾ.ಅಜಯ ಸಿಂಗ್, ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕ ತಿಪ್ಪಣಪ್ಪ ಕಮಕನೂರ ಸಹ ಸಂವಿಧಾನ ಶಿಲ್ಪಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.