ವೇತನ ಪಾವತಿ, ವೈದ್ಯರಿಗೆ ಕ್ವಾರೆಂಟೈನ್ ವ್ಯವಸ್ಥೆಗೆ ಆಗ್ರಹಿ ಜಿಲ್ಲಾ ಆಸ್ಪತ್ರೆ ನೌಕರರಿಂದ ಪ್ರತಿಭಟನೆ

0
94

ಕಲಬುರಗಿ: ಇಲ್ಲಿನ ಜಿಲ್ಲಾ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿರುವ ನೌಕರರ ವೇತನ ಪಾವತಿ ಮತ್ತು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಮತ್ತು ನರ್ಸ್ ಗಳಿಗೆ ಕ್ವಾರೆಂಟೈನ್ ವ್ಯವಸ್ಥೆ ಮಾಡಬೇಕೆಂದು ಇಂದು ಜಿಲ್ಲಾ ಆಸ್ಪತ್ರೆಯ ನೌಕರರಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವ ಸಿಬ್ಬಂದಿಗಳಿಗೆ ಕ್ವಾರೆಂಟೈನ್ ವ್ಯವಸ್ಥೆ ಇಲ್ಲದೇ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಪ್ರತಿ ದಿನ ಮನೆಗೆ ಹೋಗುವುದು ಬರುವುದು ನಡೆಯುತ್ತಿದ್ದು, ಇದರಿಂದ ಮನೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಭಯ ದೂರು ಮಾಡುವ ಅಗತ್ಯ ನಿರ್ಮಾಣವಾಗಿದ್ದು, ಕಾರ್ಯನಿರ್ವಹಿಸುವ ನೌಕರರಿಗೆ ಪ್ರತೇಕ ಕ್ವಾರೆಂಟೈನ್ ವ್ಯವಸ್ಥೆ ಮಾಡಬೇಕೆಂದು ಈ ಸಂದರ್ಭದಲ್ಲಿ ವೈದ್ಯರೊಬ್ಬರು ಮಾತನಾಡಿ ಆಗ್ರಹಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಆಸ್ಪತ್ರೆಯ ನೌಕರರಾದ ಚಂದ್ರಕಾಂತ ಏರಿ ಮಾತನಾಡಿ, ಆಸ್ಪತ್ರೆಯ ಗ್ರೂಪ್, “ಎ” ಯಿಂದ “ಡಿ” ವರೆಗಿನ ನೌಕರರ ಮಾರ್ಚ್ ತಿಂಗಳ ವೇತನ, ಅರಿಯರ್ ಪಾವತಿಯಾಗದೇ, ಕುಟುಂಬಿಕ ಜೀವನದಲ್ಲಿ ಕಷ್ಟ ಉಂಟಾಗುತ್ತಿದೆ. ಬಾಡಿಗೆ ಮನೆಯಲ್ಲಿರುವ ನೌಕರ ಸ್ಥಿತಿ ಆತಂಕಕ್ಕೆ ಸಿಲುಕಿ, ಜೀವನ ನಡೆಸುವುದು ಕಷ್ಟವಾಗುತ್ತಿದೆ. ತಿಂಗಳ ಬಾಕಿ ವೇತನ ಪಾವತಿಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಸೇರಿದಂತೆ ಸಿಬ್ಬಂದಿಗಳು ಜಿಲ್ಲಾ ಆಸ್ಪತ್ರೆಯ ನಿರ್ದೇಶಕರಿಗೆ ಮನವಿ ಮಾಡಿ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here