ಚಿಂಚೋಳಿ: ಇಲ್ಲಿನ ಚಂದನಕೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಟಗಾ ಗ್ರಾಮದ ಬಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಬಿಲ್ಡಿಂಗ್ ಕಟ್ಟಡ ನಿರ್ಮಾಣ ಕಾಮಗಾರಿ ಕಾರ್ಮಿಕರಿಗೆ ಕೂಲಿ ವೇತನ ನೀಡದ ವಂಚಿಸುತ್ತಿರುವ ಗುತ್ತೇದಾರ ಮತ್ತು ಇಂಜಿನಿಯರ್ ಗಳ ಮೇಲೆ ಕಾನೂನು ಕ್ರಮ ಕೈಗೊಳಬೇಕೆಂದು C.P.I.(M) ಪಕ್ಷದ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದ್ದಾರೆ.
ಶಾಲೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ಅದೆ ಕೆಲಸದ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಬೇರೆ ಏನು ಗತಿ ಇಲ್ಲದಂತಾಗಿದೆ. ಲಾಕ್ ಡೌನ್ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಕೂಲಿ ವೇತನ ನೀಡದಿರುವುದು ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಲುಕಿ ಹೊಟ್ಟೆ ತುಂಬಿಸಿಕೊಳ್ಳಲು ಕಾರ್ಮಿಕರ ಮಕ್ಕಳು ಪರದಾಡುವಂತಹದಾಗಿದ್ದು, ತುತು ಅನ್ನಕ್ಕೂ ಕೈ ಚಾಚುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಕಾರ್ಮಿಕರ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಜಿಲ್ಲಾಧಿಕಾರಿಗಳು ಮತ್ತು ತಹಸಿಲ್ದಾರರು ನೋಡಲ್ ಅಧಿಕಾರಿಗಳು ಕೂಡಲೇ ಮದ್ಯೆ ಪ್ರವೇಶಿಸಿ ಸಂಬಂಧಪಟ್ಟ ಗುತ್ತೇದಾರ ಹಾಗೂ ಇಲಾಖೆಯ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳಬೇಕೆಂದು ಹಣಮಂತ ಪೂಜಾರಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.