ರಾವೂರು ರಥೋತ್ಸವ: 8 ಜನರ ಬಂಧನ, 150ಕ್ಕೂ ಹೆಚ್ಚು ಗ್ರಾಮಸ್ಥರ ಮೇಲೆ ಪ್ರಕರಣ ದಾಖಲು

0
141

ಕಲಬುರಗಿ: ಲಾಕ್‍ಡೌನ್ ಉಲ್ಲಂಘಿಸಿ ಗುರುವಾರ ಏಪ್ರಿಲ್ 16 ರಂದು ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ದೇವರ ದೇವಸ್ಥಾನದ ಮಠದ ಜಾತ್ರಾ ಮಹೋತ್ಸವ ಜರುಗಿಸಿದ ಹಿನ್ನೆಲೆಯಲ್ಲಿ, ದೇವಸ್ಥಾನದ ಮಠದ 20 ಜನ ಹಾಗೂ 150 ಕ್ಕೂ ಹೆಚ್ಚು ಗ್ರಾಮಸ್ಥರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಇದೀಗ ಐವರನ್ನು ಬಂಧಿಸಿ, ಎಂಟಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಯಡಾ ಮಾರ್ಟಿನ್  ಮಾರ್ಬನ್ಯಾಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Contact Your\'s Advertisement; 9902492681

ಸದ್ಯ ರಾವೂರು ಗ್ರಾಮದಲ್ಲಿ 14 ದಿನ ಸೀಲ್ ಡೌನ್ ಮಾಡಲಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here