ಕಲಬುರಗಿ: ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಕುರಿತು ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯುರಪ್ಪನವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದ್ದು, ಭಾಗಶಃ ಜಾರಿಯಾಗಲಿದ್ದು, ಇದು ಕೃಷಿ, ಪಶು ಸಂಗೋಪನೆ ಮತ್ತು ತೋಟಗಾರಿಕೆ ಕ್ಷೇತ್ರಗಳ ಚಟುವಟಿಕೆಗಳಿಗೆ ಸಡಿಲಿಕೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆಯಾಗದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಈಗಾಗಲೇ ಮುಂಗಾರು ಹಂಗಾಮು ಸಮೀಪಿಸುತ್ತಿದ್ದು, ರೈತರ ಕೃಷಿ ಅವಲಂಬಿತ ಉಪಕರಣಗಳನ್ನು ಹಾಗೂ ಬೀಜ, ರಸಗೊಬ್ಬರ ಹಾಗೂ ಇನ್ನಿತರೆ ಸಾಮಾನುಗಳನ್ನು ಖರೀದಿಸಲು ಅನುಕೂಲವಾಗಲಿದೆ .ಇನ್ನು ಸಕಾಲದಲ್ಲಿ ಮಳೆಯಾದರೆ ಬಿತ್ತನೆ ಕಾರ್ಯವು ಸುಗಮವಾಗಲಿದೆ ಎಂದು ಅಂಬಾರಾಯ ಅಷ್ಠಗಿ ಪತ್ರಿಕೆ ಪ್ರಕಟಣೆಯಲ್ಲಿ ಹೇಳಿದ್ದಾರೆ.