ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ (ಕೊವೀಡ್-19) ಹರಡುವಿಕೆಯನ್ನು ತಡೆಗಟ್ಟಲು ಅನುಕೂಲವಾಗುವಂತೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ವಿಶೇಷ ತಂಡಗಳು ಹಾಗೂ ಸಿಬ್ಬಂದಿಗಳಾದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕರು ಪ್ರತಿದಿನ ಮನೆ, ನಿವಾಸಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಹಾಗೂ ಮಾಹಿತಿ ಸಂಗ್ರಹಿಸಲಿದ್ದಾರೆ.
ಇದಕ್ಕೆ ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು. ಅವರ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಲಬುರಗಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಎಚ್ಚರಿಕೆ ನೀಡಿದ್ದಾರೆ.