ಕಲಬುರಗಿ: ಕೊರೋನಾ ಸೋಂಕಿಗೆ ಒಳಗಾಗಿ ESIC ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ರೋಗಿಗಳು ಕೊರೋನಾ ಸೊಂಕಿನಿಂದ ಗುಣಮುಖರಾಗಿ ಗುರುವಾರ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ ಅವರು ತಿಳಿಸಿದ್ದಾರೆ.
ಜಿಲ್ಲೆಯ 36 ಕೊರೋನಾ ಪೀಡಿತರ ಪೈಕಿ ಇದೂವರೆಗೆ 6 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ನಾಲ್ಕು ಜನ ಸೋಂಕೆಗೆ ಬಲಿಯಾಗಿದ್ದಾರೆ. ಪ್ರಸ್ತುತ 26 ವೈರಸ್ ಪೀಡಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.